ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೈವರು ಸ್ಥಳದಲ್ಲೇ ಅಸು ನೀಗಿರುವ ಘಟನೆಯು ಹಾವೇರಿಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದ್ದು, ಸಿದ್ದಾರ್ಥ (27), ಹಸನ್ಮುಖಿ (29), ಯಶೋಧಾ ಬಾಯಿ (51) ಮೃತಪಟ್ಟವರು. ಸೌಂದರ್ಯ, ಸಿಂಧು, ಕಶ್ವಶ್ರೀ ಗಂಭೀರ ಗಾಯಗೊಂಡಿದ್ದು, ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡವಾಣಿಯ ನಿವಾಸಿಗಳು. ರಾಣೇಬೆನ್ನೂರಿನಿಂದ ದಾವಣಗೆರೆಗೆ ಹೋಗುತ್ತಿದ್ದಾಗ ಈ ದುರಂತ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬ್ರಹ್ಮಾವರ ಸಮೀಪ ಬೆಂಕಿ ಹೊತ್ತಿಕೊಂಡಿದ್ದು, ಏಳು ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನಿರ್ವಾಹಕರು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


