ಶೀಘ್ರದಲ್ಲೇ ಹೈಕಮಾಂಡ್ ಒಳ್ಳೆಯ ಸುದ್ದಿ ಕೊಡಲಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಮಾಜಿ ಸಂಸದ ಜಿ.ಸಿದ್ದೇಶ್ವರ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡಾಯ ಘೋಷಿಸಿರುವ ಭಿನ್ನಮತೀಯರ ಗುಂಪು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಿರಿಯ ಮುಖಂಡರನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾತುಕತೆ ಏನಾಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ನಮ್ಮ ಬೇಡಿಕೆಯಲ್ಲಿ ಆಲಿಸಿದೆ. ಶೀಘ್ರದಲ್ಲೇ ಒಳ್ಳೆಯ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಇದೇ ವೇಳೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅನರ್ಹ ಇದ್ದಾನೆ. ಅವನು ಸರಿಯಿಲ್ಲ. ಹಲ್ಕಾ ನನ್ಮಗ ಇದ್ದಾನೆ. ನಕಲಿ ಸಹಿ ಹಾಕಿ ಅಪ್ಪನನ್ನೇ ಜೈಲಿಗೆ ಕಳುಹಿಸಿದವ ಎಂದು ಆರೋಪಿಸಿದರು.