Saturday, October 10, 2026
Menu

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿಸಲು ಸಿಎಂಗೆ ಮನವಿ

ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಜಿಗ್ಮೇಟ್ ವಾಂಗ್ಡೋಸ್ ಜ್ಯೋತಿ ಅವರ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳ ಬೌಧ ಬಿಕ್ಕುಗಳನ್ನೊಳಗೊಂಡ ನಿಯೋಗವು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಅಭಿನಂದಿಸಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಬೌಧ ಬಿಕ್ಕುಗಳಾದ ಲೋಬ್ಸಂಗ್ ನೋರ್ಬು, ಪ್ಯಾನಿಚೈಟೊ ಮತ್ತಿತರರು ಇದ್ದರು.

2026-27ನೇ ಸಾಲಿನ ಬಜೆಟ್‌ನಲ್ಲಿ ಬೌದ್ಧ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಅಭಿವೃದ್ಧಿ ಮಂಡಳಿ/ ನಿಗಮ ರಚನೆಗೆ ಅವಕಾಶ ಕಲ್ಪಿಸಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಪ್ರಸ್ತುತ ಬೌದ್ಧ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಕ್ರಿಶ್ಚಿಯನ್ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿಯೇ ತರಬೇಕು ಎಂದು ಮನವಿ ಮಾಡಲಾಗಿದೆ.

Related Posts

Leave a Reply

Your email address will not be published. Required fields are marked *