Menu

ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ.

ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ ಮಗನನ್ನು ಸ್ಥಳೀಯರು ರಕ್ಷಿಸಸುವಲ್ಲಿ ಯಶಶ್ವಿಯಾದರು, ಮಕ್ಕಳಾದ ಸಾನ್ವಿಕಾ (6), ತನ್ವಿಕಾ (4) ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಚಿತ್ರದುರ್ಗದಿಂದ ಮಧ್ಯಾಹ್ನ ಬಸ್‌ನಲ್ಲಿ ನಗರಕ್ಕೆ ಮಹಿಳೆ ಚಿಕ್ಕಲ್ ರಸ್ತೆಯ ಶ್ರೀ ಅರಕೇಶ್ವರ ದೇವಾಲಯದ ಬಳಿ ತೆರಳಿ ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ನದಿಗೆ ತಳ್ಳಿ, ಬಳಿಕ 11 ತಿಂಗಳ ಮಗು ಜೊತೆ ನದಿಗೆ ಹಾರಿದ್ದಳು ಎನ್ನಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಹಾಗೂ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀಶೈಲದ ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ

ಶ್ರೀಶೈಲದವಡ್ಡೇರಾದಲ್ಲಿರುವ ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸುಧಾಕರ್ (36), ಗೋಗುಳ ಆದಿಲಕ್ಷ್ಮಿ (50), ಮಲ್ಲೇಶ್ವರಿ (45), ಶ್ರೀದೇವಿ (33) ಮತ್ತು ಮಣಿಕಂಠ (15) ಆತ್ಮಹತ್ಯೆ ಮಾಡಿಕೊಂಡವರು. ಇವರೆಲ್ಲ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಬಟ್ಟಲಪಲ್ಲಿ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಜುಲೈ 28 ರಂದು ಈ ಕುಟುಂಬ ಆಟೋದಲ್ಲಿ ಬಂದು ಹೋಟೆಲ್‌ನಲ್ಲಿ ರೂಮ್‌ ಪಡೆದುಕೊಂಡಿದ್ದಾರೆ. ಮೂರು ದಿನ ಕಳೆದರೂ ಹೊರಗೆ ಬಾರದಿದ್ದರಿಂದ ಹೋಟೆಲ್‌ನವರು ಅನುಮಾನಗೊಂಡು ಹೋದಾಗ ರೂಮ್‌ ಬಳಿ ಕೆಟ್ಟ ವಾಸನೆ ಬರುತ್ತಿತ್ತು. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಪೊಲೀಸರು ಬಾಗಿಲು ತೆಗೆದು ಪರಿಶೀಲಿಸಿದಾಗ ಸ್ನಾನ ಗೃಹದಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಪತ್ತೆಯಾಗಿದ್ದಾರೆ.

Related Posts

Leave a Reply

Your email address will not be published. Required fields are marked *