Saturday, October 10, 2026
Menu

ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್‌ ನೀರು: ಸಿಡಬ್ಲ್ಯುಆರ್‌ಸಿ ಆದೇಶ ಎತ್ತಿ ಹಿಡಿದ ಸಿಡಬ್ಲ್ಯುಎಂಎ

ತಮಿಳುನಾಡಿಗೆ ಪ್ರತಿದಿನ ಒಂಬತ್ತು ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ.

ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಿಂದ ಎಸಿಎಸ್ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ತಮಿಳುನಾಡಿನಿಂದ ನೀರಾವರಿ ಕಾರ್ಯದರ್ಶಿ ಪ್ರಶಾಂತ್, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯಂ ಭಾಗಿಯಾಗಿದ್ದರು.

ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪಾಲಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ತಮಿಳುನಾಡು 28 ಟಿಎಂಸಿ ನೀರಿನ ಬೇಡಿಕೆ ಇಟ್ಟಿತ್ತು, ಪ್ರಾಧಿಕಾರ ಅದನ್ನು ಒಪ್ಪಿಲ್ಲ. ಮುಂದೆ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಆಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನೀರು ಹರಿಸಲು ಸೂಚಿಸಿದೆ ಎಂದು ಗೌರವ್‌ ಗುಪ್ತಾ ಮಾಹಿತಿ ನೀಡಿದ್ದಾರೆ.

ಕಾವೇರಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಈ ಹಿಂದಿನ ಆದೇಶ ಪ್ರತಿ ದಿನ 12000 ಕ್ಯೂಸೆಕ್ ನೀರು ಹರಿಸಬೇಕೆಂಬುದನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿ ಆಕ್ಷೇಪಿಸಿತ್ತು. ಸುಪ್ರೀಂ ಕೋರ್ಟ್ ಆಗಸ್ಟ್ 25 ರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ನಂತರ ಅಂಕಿಅಂಶಗಳ ಸಹಿತ ಹಾಜರಾಗುವಂತೆ ಉಭಯ ರಾಜ್ಯಗಳಿಗೆ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ನಿಗದಿಪಡಿಸಿದೆ.

Related Posts

Leave a Reply

Your email address will not be published. Required fields are marked *