ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಶಂಕೆಯಿಂದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಕೊಲೆಗೈದ ವ್ಯಕ್ತಿಯ ಪೋಟೊವನ್ನು ತನ್ನ ಸ್ಟೇಟಸ್‌ಗೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಕೊಲೆ ಆರೋಪಿ ಪತ್ನಿಯೊಂದಿಗೆ ಸೇರಿ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕಲ್ಲೋಳಿ ಗ್ರಾಮದ ಬನಪ್ಪ ಒಡೆಯರ್ ಮತ್ತು ಲಕ್ಷ್ಮೀ ಒಡೆಯರ್ ಗುಜನಟ್ಟಿ ಗ್ರಾಮದ ರಮೇಶ್ ಬಂಟ್ರೋಳಿ ಎಂಬಾತನನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ರಮೇಶ್ ಆರೋಪಿ ಬನಪ್ಪನ ಪತ್ನಿ ಲಕ್ಷ್ಮೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಶಂಕೆಯಿದೆ.
ರಮೇಶ್, ಲಕ್ಷ್ಮೀ ಜೊತೆ ತೆಗೆದುಕೊಂಡಿದ್ದ ಪೋಟೊವನ್ನು ವಾಟ್ಸಾಪ್ ಸ್ಟೇಟಸ್‌ಗೆ ಹಾಕಿದ್ದ. ಆಕ್ರೋಶಗೊಂಡಿದ್ದ ಬನಪ್ಪ ಹಾಗೂ ಲಕ್ಷ್ಮೀ ಮನೆಯ ಹಿಂಭಾಗದ ಜಮೀನಿನಲ್ಲೇ ರಮೇಶನಿಗೆ ಡುಗೋಲಿನಿಂದ ತಲೆ ಹಾಗೂ ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.


