Wednesday, August 26, 2026
Menu

ಪ್ರಶ್ನೆಪತ್ರಿಕೆ ಸೋರಿಕೆ: ಮಹಾರಾಷ್ಟ್ರದಲ್ಲಿ ಡ್ರಗ್‌ ಇನ್ಸ್‌ಪೆಕ್ಟರ್‌ ನೇಮಕ ಪ್ರಕ್ರಿಯೆ ರದ್ದು

ಮಹಾರಾಷ್ಟ್ರ ಲೋಕಸೇವಾ ಆಯೋಗ ನಡೆಸಿದ ಡ್ರಗ್‌ ಇನ್ಸ್‌ಪೆಕ್ಟರ್‌, ಗ್ರೂಪ್‌ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮ ಆರೋಪಗಳ ಕುರಿತು ನಡೆಸಲಾದ ಪ್ರಾಥಮಿಕ ತನಿಖೆ ಬಳಿಕ ನೇಮಕ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ.

ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ಡ್ರಗ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗಾಗಿ ಪರೀಕ್ಷೆ ನಡೆಯುವ ಎರಡು ದಿನ ಮೊದಲು ಪ್ರಶ್ನೆ ಪತ್ರಿಕೆ ಹಾಗೂ ಅದರಲ್ಲಿದ್ದ ಪ್ರಶ್ನೆಗಳು ಕೆಲವು ಅಭ್ಯರ್ಥಿಗಳಿಗೆ ಲಭ್ವವಾಗಿವೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಶ್ನೆಗಳು ಸಾಮಾಜಿಕ ಜಾಲತಾಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಅಭ್ಯರ್ಥಿಗಳಿಗೆ ತಲುಪಿವೆ ಎನ್ನಲಾಗಿದೆ.

ಪರೀಕ್ಷಾ ಅಭ್ಯರ್ಥಿಗಳು ಹಾಗೂ ಜನಪ್ರತಿನಿಧಿಗಳಿಂದ ಇ-ಮೇಲ್ ಮೂಲಕ ದೂರುಗಳು ಬಂದ ಹಿನ್ನೆಲೆ ಆಯೋಗ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಪಡಿಸಲು ನಿರ್ಧರಿಸಿದೆ. ಹೊಸ ಪರೀಕ್ಷೆ ನಡೆಸುವ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪ್ರಾಥಮಿಕ ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪ ಗಂಭೀರವಾಗಿ ಕಂಡುಬಂದಿದ್ದರೆ, ಈವರೆಗೆ ಎಫ್‌ಐಆರ್ ಏಕೆ ದಾಖಲಿಸಿಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ಸಂದೀಪ್ ದೇಶಪಾಂಡೆ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಯಾರನ್ನಾದರೂ ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

Related Posts

Leave a Reply

Your email address will not be published. Required fields are marked *