ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಆಕೆಯ ಕುಟುಂಬದವರು ವ್ಯಕ್ತಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ.
34 ವರ್ಷದ ಈರಣ್ಣ ಅಗಸಿಬಾಗಿಲು ಮೃತಪಟ್ಟ ವ್ಯಕ್ತಿ. ಆತ ರೇಣುಕಾ ಎಂಬ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈರಣ್ಣ ಹಾಗೂ ರೇಣುಕಾ ಒಟ್ಟಿಗೆ ಇದ್ದ ವೇಳೆ ಆಕೆಯ ಕುಟುಂಬಸ್ಥರು ರೆಡ್‌ಹ್ಯಾಂಡ್ ಆಗಿ ಹಿಡಿದು ಈರಣ್ಣನ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ್ದಾರೆ.
ರೇಣುಕಾ ಕಳಸಾಪೂರ (22), ಪತಿ ಆಂಜನೇಯ ಕಳಸಾಪೂರ (32), ರೇಣುಕಾಳ ತಾಯಿ ಹನುಮವ್ವ ಭೋವಿ (40) ಹಾಗೂ ಸಹೋದರ ಧರ್ಮರಾಜ್ ಭೋವಿ (24) ಕೊಲೆ ಆರೋಪಿಗಳು. ಕೊಲೆ ಮಾಡಿದ ಬಳಿಕ ಆರೋಪಿಗಳು ಈರಣ್ಣ ವಿರುದ್ಧವೇ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ವಿಚಾರಣೆ ವೇಳೆ ಸತ್ಯಾಂಶ ಪೊಲೀಸರಿಗೆ ತಿಳಿದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುರುಮೂರ್ತಿ ಮೃತಪಟ್ಟ ಯುವಕ.
ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೆಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ಶವ ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಶ್ರವಣ, ಅಭಿ ಎಂಬವರ ವಿರುದ್ಧ ಕುಟುಂಬಸ್ಥರು ದೂರು ನೀಡಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


