Wednesday, October 14, 2026
Menu

ಚಿಂಚೋಳಿಯಲ್ಲಿ ಪತ್ನಿ ಜೊತೆ ಜಗಳವಾಡಿ ಮಗನ ನದಿಗೆಸೆದು ಕೊಲೆಗೈದ ತಂದೆ

ಹೆಂಡತಿಯ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ.

ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿ, ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ ಆರೋಪಿಯು ಇದೇ ಸಿಟ್ಟಲ್ಲಿ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತಾ ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ.

ಈ ವಿಷಯ ತಿಳಿದ ಬಳಿಕ ಗಂಡನ ವಿರುದ್ಧ ಪತ್ನಿ ಕಲ್ಪನಾ ದೂರು ದಾಖಲಿಸಿದ್ದಾಳೆ. ಪೊಲೀಸರು ಮಗುವಿನ ಮೃತದೇಹವನ್ನು ಜಲಾಶಯದಿಂದ ಹೊರತೆಗೆದಿದ್ದಾರೆ. ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *