Menu

ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್ : ಆರ್‌ ಅಶೋಕ

R Ashoka

“ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ”  ಎಂಬ  ಸಚಿವ ಬಸವ ರಾಜರಾಯರೆಡ್ಡಿ  ಅವರ ಹೇಳಿಕೆಗೆ  ಪ್ರತಿಕ್ರಿಯಿಸಿರುವ  ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸಿಎಂ  ಡಿಕೆ ಶಿವಕುಮಾರ್‌ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್‌  ಎಂದು  ಹರಿ ಹಾಯ್ದಿದ್ದಾರೆ.

ಸಿಎಂ @DKShivakumar ಅವರೇ, ಹಿಂದೂಗಳ ಮತ ಬೇಕಾದಾಗ ದೇವಸ್ಥಾನ ಸುತ್ತುವ ನಾಟಕ ಆಡುವ ನಿಮಗೆ, ಅಧಿಕಾರ ಸಿಕ್ಕ ಮೇಲೆ ನಿಮ್ಮದೇ ಸಂಪುಟದ ಸಚಿವರು ಅದೇ ಹಿಂದೂ ಧರ್ಮವನ್ನು ಅವರಹೇಳನ ಮಾಡಿದಾಗ ಮೌನ ವಹಿಸುವುದೇಕೆ ಎಂದುಕಿಡಿ ಕಾರಿದ್ದಾರೆ.

ನಿಮ್ಮ ಸಂಪುಟದ ಸಚಿವ ಬಸವರಾಜ ರಾಯರೆಡ್ಡಿ  “ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ” ಎಂದು ಬಹಿರಂಗವಾಗಿ ನೀಡಿರುವ ಪ್ರಚೋದನಾಕಾರಿ ಹೇಳಿಕೆ ಇಡೀ ರಾಜ್ಯಾದ್ಯಂತ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಧರ್ಮದ ಬಗ್ಗೆ ಯಾರಿಗಾದರೂ ಅವರವರ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿದ್ದುಕೊಂಡು ಕೋಟ್ಯಂತರ ಹಿಂದೂಗಳ ಆರಾಧನೆ, ಪವಿತ್ರ ಮಠ-ಮಾನ್ಯಗಳು ಮತ್ತು ಸನಾತನ ಪರಂಪರೆಯ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರ ಮತ್ತು ಹಿಂದೂ ಧರ್ಮದ ಮೇಲಿನ ಬಹಿರಂಗ ದಾಳಿ, ಹಿಂದೂಗಳ ಶ್ರದ್ಧೆ, ನಂಬಿಕೆಗಳಿಗೆ ಮಾಡಿರುವ ಘೋರ ಅಪಮಾನ ಎಂದು ಹೇಳಿದ್ದಾರೆ.

ಕರ್ನಾಟಕದ ಕೋಟ್ಯಾಂತರ ಹಿಂದೂಗಳಿಗೆ ರಾಯರೆಡ್ಡಿ ಅವರ ಅವಹೇನಕಾರಿ ಹೇಳಿಕೆಗಿಂತಲೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜಾಣ ಮೌನವೇ ಹೆಚ್ಚಿನ ಆಕ್ರೋಶ ತರಿಸುತ್ತಿದೆ. ನಿಮ್ಮ ಈ ಮೌನವೇ ರಾಜ್ಯಕ್ಕೆ ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ. ಹಿಂದೂಗಳ ಭಾವನೆ ನಜ್ಜುಗುಜ್ಜಾದರೂ ಚಿಂತೆಯಿಲ್ಲ, ಓಲೈಕೆ ರಾಜಕಾರಣಕ್ಕಾಗಿ ಸಚಿವರನ್ನು ಮಾತ್ರ ರಕ್ಷಿಸಬೇಕು. ಇದೇ ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಅಸಲಿ ಮುಖವಲ್ಲವೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿದ್ದಾರೆ.

ಸಿಎಂ @DKShivakumar ಅವರೇ , ಈಗ ನಿಮಗಿದು ಅಗ್ನಿಪರೀಕ್ಷೆ. ರಾಯರೆಡ್ಡಿ ಅವರ ಈ ಹಿಂದೂ ವಿರೋಧಿ ಅವಹೇಳನಕಾರಿ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸಿ. ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಮಾಡಿರುವ ಅವರಿಂದ ತಕ್ಷಣವೇ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಿ.  ಅವರು ಅದಕ್ಕೆ ಸಿದ್ಧರಿಲ್ಲದಿದ್ದರೆ, ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಿ. ಇವೆರಡನ್ನೂ ಮಾಡದಿದ್ದರೆ ರಾಜ್ಯದ ಕೋಟ್ಯಾಂತರ ಹಿಂದೂಗಳ ಈ ಪ್ರಶ್ನೆಗಳಿಗೆ ನಿಮ್ಮ ಮೌನವೇ ಉತ್ತರವಾಗಲಿದೆ. ಸನಾತನ ಧರ್ಮವನ್ನು ನಿಂದಿಸಿದ್ದು ರಾಯರೆಡ್ಡಿ ಅವರ ವೈಯಕ್ತಿಕ ಅಭಿಪ್ರಾಯವೋ? ಅಥವಾ ಇದು ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಮ್ಮತಿ ಪಡೆದ hidden ಅಜೆಂಡಾನೋ? ಎಂದು ಪ್ರಶ್ನಿಸಿದ್ದಾರೆ.

ಹಿಂದೂಗಳ ಮತಗಳನ್ನು ಪಡೆದು ಅಧಿಕಾರಕ್ಕೇರಿ, ಅದೇ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ದಿನನಿತ್ಯ  ನಿಂದಿಸುವ ಈ ನೀಚ ರಾಜಕಾರಣವನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ. ಹಿಂದೂ ಧರ್ಮ ಮತ್ತು ಮಠ-ಮಾನ್ಯಗಳ ಮೇಲೆ ದಾಳಿಯಾದಾಗ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತುಕೊಳ್ಳುವ ಮುಖ್ಯಮಂತ್ರಿ ಡಿಕೆಶಿ ಅವರು ಈ ಧಾರ್ಮಿಕ ನಿಂದನೆಯ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ರಾಯರೆಡ್ಡಿ ಅವರು ತಕ್ಷಣ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವೇ ಸಂಪುಟದಿಂದ ಹೊರನಡೆಯಬೇಕು

ಡಿಕೆ ಶಿವಕುಮಾರ್ ಅವರೇ – ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆ ದೊಡ್ಡದೋ ಅಥವಾ ನಿಮ್ಮ ಸಚಿವರ ಕುರ್ಚಿ ಮತ್ತು ಮತಬ್ಯಾಂಕ್ ದೊಡ್ಡದೋ? ಕರ್ನಾಟಕ ನೋಡುತ್ತಿದೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *