ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು.
ಪೋಷಕರು ಚೆನ್ನಾಗಿ ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ನೊಂದ ಆಕೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೃಷ್ಟಿಯನ್ನು ಮನೆಯಲ್ಲಿಯೇ ಬಿಟ್ಟು ತಂದೆ-ತಾಯಿ ದೇವಸ್ಥಾನಕ್ಕೆ ತೆರಳಿದ್ದರು. ಅವರು ಪೂಜೆ ಮುಗಿಸಿ ಮನೆಗೆ ಬಂದಾಗ ಸೃಷ್ಟಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪೋಷಕರು ಪದೇ ಪದೇ ಓದು ಎಂದು ಹೇಳುತ್ತಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾಳೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಹಾಸನದಲ್ಲಿ ಗುಂಡೇಟಿಗೆ ರೈತ ಬಲಿ
ಹಾಸನದ ಬೇಲೂರು ತಾಲೂಕಿನ ಬಂದಹಳ್ಳಿ ಗ್ರಾಮದ ಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ರೈತರೊಬ್ಬರು ಮೃತಪಟ್ಟಿದ್ದಾರೆ. ಕೇಶವಶೆಟ್ಟಿ (61) ಗುಂಡೇಟಿಗೆ ಬಲಿಯಾದವರು. ಸಂಜೆ ಬಂದೂಕು ಹಿಡಿದು ಕಾಫಿ ತೋಟಕ್ಕೆ ತೆರಳಿದ್ದರು. ಕೈಯಲ್ಲಿದ್ದ ಬಂದೂಕಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಗುಂಡು ಹಾರಿದ ನಂತರ ಸ್ವಲ್ಪ ದೂರು ನಡೆದುಕೊಂಡು ಬಂದು ನಂತರ ಮೃತಪಟ್ಟಿದ್ದಾರೆ, ಗುಂಡು ಹಾರಿದ ಸ್ಥಳದಲ್ಲಿ ಅವರ ಮೊಬೈಲ್ ಬಿದ್ದಿದೆ, ಮೃತದೇಹ ಬಿದ್ದಿರುವ ಕೆಲವು ಮೀಟರ್ ಹಿಂದೆ ಬಂದೂಕು ಬಿದ್ದಿದೆ.
ಸ್ಥಳಕ್ಕೆ ಸೋಕೋ ತಂಡ ಹಾಗೂ ಎಸ್‌ಪಿ ಶುಭಾನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


