ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ವಿನಾಯಕ ಕೆ.ಯು (25), ಮಂಜುನಾಥ (29) ಹಾಗೂ ಬಸವರಾಜ (34)
ಎಂದು ಗುರುತಿಸಲಾಗಿದೆ.
ಗಾಯಗೊಂಡ ಅಭಿಷೇಕ, ಅಜಯ್ ಹಾಗೂ ಬಸನಗೌಡ ಸ್ಥಿತಿ ಕೂಡ ಗಂಭೀರವಾಗಿದೆ. ಸ್ಥಳಕ್ಕೆ ಗರಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಬಳಿಯ ದಾಬಾದಲ್ಲಿ ಊಟ ಮುಗಿಸಿ ಧಾರವಾಡ ಕಡೆಗೆ ಬರುತ್ತಿದ್ದಾಗ ಈ ದುರಂತ ನಡೆದಿದೆ. ಮೂವರ ಶವಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


