ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ ತಪ್ಪಿತಸ್ಥರು ಎಂದು ಆದೇಶ ಹೊರಡಿಸಿರುವ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಘೋಷಣೆ ಮಾಡಬೇಕಿದೆ.
2008ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ಗೆ ನಕಲಿ ದಾಖಲೆ ನೀಡಿ 7.17 ಕೋಟಿ ರೂ. ಸಾಲ ಪಡೆದು ವಂಚಿಸಿದ್ದರು. ನಕಲಿ ಸಾಲಗಾರರ ಪಟ್ಟಿ ಹಾಗೂ ನಕಲಿ ಸ್ಯಾಲರಿ ಸ್ಲಿಪ್ ನೀಡಿದ್ದು ಅಲ್ಲದೇ ನಕಲಿ ಸಹಿ ಹಾಕಿದ ದಾಖಲೆಗಳನ್ನು ನೀಡಿ ಬ್ಯಾಂಕ್ ಗೆ ವಂಚಿಸಿದ್ದರು.
ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಾಗಿದೆ. ಆರೋಪಿಗಳಿಗೆ ಕನಿಷ್ಠ ೩ ವರ್ಷ ಶಿಕ್ಷೆಯಾದರೆ ಜೈಲು ಸೇರಲಿದ್ದಾರೆ. ಒಂದು ವೇಳೆ ೩ ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದರೆ ಜಾಮೀನು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.