Menu

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು

ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿಸಂಭವಿಸಿದೆ.

ಬೆಂಗಳೂರು ಉತ್ತರದ ಸಿಗೇಹಳ್ಳಿ ಗೇಟ್ ಬಳಿಯ ಶಿವಾಜಿ ಗ್ರೀಲ್ ಲೇಔಟ್ ನಲ್ಲಿ ಗುರುವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಹೊರ ರಾಜ್ಯದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶ ಮೂಲದ ಉದಯ ಭಾನು (25) ಹಾಗೂ ಬಿಹಾರ ಮೂಲದ ರೋಷನ್ (23) ಮೃತಪಟ್ಟ ದುರ್ದೈವಿಗಳು.

ಇಂಜಿನಿಯರ್ ಹಾಗೂ ಗುತ್ತಿಗೆದಾರ ಸತೀಶ್ ಅವರಿಗೆ ಸೇರಿದ 3 ಅಂತಸ್ತಿನ ಕಟ್ಟಡ ಕಾಮಗಾರಿ ನಡೆದಿದ್ದು, ಮನೆಯ ಮರದ ಕೆಲಸಗಳು ನಡೆಯುವಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *