Saturday, September 05, 2026
Menu

ಗದಗ ಮೀಟರ್‌ ಬಡ್ಡಿ ದಂಧೆ: 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ, ಕುಟುಂಬ ಬೀದಿಗೆ

ಗದಗ ಜಿಲ್ಲೆಯಲ್ಲಿ ಮೀಟರ್‌ ಬಡ್ಡಿ ದಂಧೆ ಮಿತಿ ಮೀರಿದ್ದು, ಸಾಲ ಪಡೆದವರ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಸಾಲ ನೀಡಿದವರು ದರೋಡೆ ಮಾಡುತ್ತಿದ್ದಾರೆ. ಬಡ್ಡಿ ರಾಕ್ಷಸರು 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ ಮಾಡಿದ್ದು, ಕಟುಂಬ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ.

ಸುರೇಖಾ ಕಬಾಡಿ ಹಾಗೂ ಮಗಳು ಅಂಬಿಕಾ ಕಬಾಡಿ ಬಡ್ಡಿ ದಂಧೆಕೋರರಾದ ಯಲ್ಲಪ್ಪ ಮಿಸ್ಕಿನ್ ಹಾಗೂ ಸುನಿಲ್ ಸೇಠ್ ಅವರಿಂದ ತಲಾ 6 ಲಕ್ಷ ಸಾಲ ಪಡೆದಿದ್ದರು. ಸುಮಾರು 7 ಲಕ್ಷ ರೂ. ಬಡ್ಡಿ ಪಾವತಿಸಿದ್ದಾರೆ. ಆದರೆ ಸಾಲದ ಹಣದ ನೆಪದಲ್ಲಿ ಕುಟುಂಬಕ್ಕೆ ಬೆದರಿಕೆ ಹಾಕಿದ ದಂಧೆಕೋರರು, ‘ಹಾಫ್ ನೋಂದಣಿ’ ಹೆಸರಿನಲ್ಲಿ 1.5 ಕೋಟಿ ರೂ. ಮೌಲ್ಯದ 12 ಪ್ಲಾಟ್‌ಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಬಾಡಿ ಕುಟುಂಬ ಬೀದಿಗೆ ಬಿದ್ದು ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ 4-5 ಕೋಟಿ ರೂ. ಮೌಲ್ಯದ 9,000 ಚದರ ಮೀಟರ್ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಅಂಬಿಕಾ ಕಬಾಡಿ ದೂರಿದ್ದಾರೆ.

2025ರ ಮಾರ್ಚ್ 15ರಂದು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದಂಧೆಕೋರರಾದ ಯಲ್ಲಪ್ಪ ಮಿಸ್ಕಿನ್, ವಿಕಾಸ್ ಮಿಸ್ಕಿನ್, ಸುನಿಲ್ ಸೇಠ್, ಪೂನಮ್ ಸೇಠ್ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದರೆ ದೂರು ನೀಡಿದ ವರ್ಷ ಕಳೆಯುತ್ತಿದ್ದರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿಲ್ಲ ಎಂದು ಸಂತ್ರಸ್ತ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ಪೊಲೀಸ್ ಅಧಿಕಾರಿಗಳು ಹಾಗೂ ಸಮಾಜದ ಪ್ರಭಾವಿ ಮುಖಂಡರು ಬಡ್ಡಿ ದಂಧೆಕೋರರ ಪರವಾಗಿ ನಿಂತು ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಸಂತ್ರಸ್ತ ತಾಯಿ-ಮಗಳು ಹೇಳಿದ್ದು, ತಮಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *