Saturday, September 12, 2026
Menu

ಗಣೇಶ ಚತುರ್ಥಿ: ಮಾಂಸ ಮಾರಾಟ ನಿಷೇಧಿಸಿ ಜಿಬಿಎ ಆದೇಶ

ಗಣೇಶ ಚತುರ್ಥಿ ಹಿನ್ನೆಲೆ ಸೆಪ್ಟೆಂಬರ್ 14 ಸೋಮವಾರ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಬಿಎ ಆದೇಶಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಸಾರ್ವಜನಿಕರು ಹಾಗೂ ವ್ಯಾಪಾರಿಗಳು ನಿಷೇಧದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡಿದ್ದು ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗಾಗಿ ಸಿದ್ಧತೆ ಕೈಗೊಳ್ಳಲಾಗಿದೆ.ಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶವಿದೆ, ಪಿಒಪಿ ಮೂರ್ತಿಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ, ಕ್ರೇನ್ ಸೇವೆ, ಆಂಬುಲೆನ್ಸ್, ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಸಂಚಾರ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 14, 16, 18, 20, 22, 24, 26, 27 ಮತ್ತು 28ರಂದು ವಿಸರ್ಜನೆಗೆ ಅವಕಾಶವಿದೆ. ಸೆಪ್ಟೆಂಬರ್ 15, 17, 19, 21, 23 ಹಾಗೂ 25ರಂದು ವಿಸರ್ಜನೆಯನ್ನು ತಡೆಯಲಾಗಿದೆ ಎಂದು ಬಿಬಿಸಿ ಸಿಬಿ ಆಯುಕ್ತ ಜಗದೀಶ್ ಜಿ. ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *