ಕಲಬುರಗಿಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರ ವಲಯದಲ್ಲಿ ಮಹಿಳೆ ಮತ್ತು ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೊಳೆತ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ, ಇವರಿಬ್ಬರು ಪ್ರೇಮಿಗಳೆಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿತ್ತಾಪುರ ಪಟ್ಟಣದ ಶರಣಮ್ಮ (32) ಮತ್ತು ಯಾದಗಿರಿಯ ಬಾಚವಾರ ಗ್ರಾಮದ ಬಸವರಾಜ್ (21 ಮೃತಪಟ್ಟವರು.
ಸ್ಥಳಕ್ಕೆ ಡಿವೈಎಸ್ಪಿ, ಸಿಪಿಐ ಮತ್ತು ಪಿಎಸ್ಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಜೋಡಿ ಕುಟುಂಬಸ್ಥರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಗಂಡ ಮಕ್ಕಳಿದ್ದಾರೆ.


