Thursday, September 17, 2026
Menu

ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ತೆರವುಗೊಳಿಸಿದ ಕಲಬುರಗಿ ಜಿಲ್ಲಾಡಳಿತ

ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಮಾಡಿರುವ ಘಟನೆ ನಡೆದಿದೆ.

ಸಿಎಂ ಡಿ.ಕೆ ಶಿವಕುಮಾರ ಅವರು ಕಲಬುರಗಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಈ ಮೂರ್ತಿ ಪ್ರತಿಷ್ಠಾಪಿಸಲಾಗಿದೆಯಾ ಎಂಬ ಆನುಮಾನ ಮೂಡಿದೆ. ಆದರೆ ಯಾವುದೇ ಅನುಮತಿ ಪಡೆಯದೆ ರಾತ್ರೋ ರಾತ್ರಿ ಪ್ರತಿಮೆ ಸ್ಥಾಪನೆ ಮಾಡಲಾದ ಹಿನ್ನೆಲೆಯಲ್ಲಿ ಅದನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತೆಗೆದು ಹಾಕಿದ್ದಾರೆ.

ಎರಡ್ಮೂರು ವರ್ಷಗಳ ಹಿಂದೆಯೂ  ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ  ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು,  ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕೂ ಅನುಮತಿ ಪಡೆದಿರಲಿಲ್ಲ.

ಈಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಕಲಬುರಗಿ ಪ್ರವಾಸದಲ್ಲಿರುವಾಮೂರ್ತಿ ಸ್ಥಾಪನೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಅಫಜಲಪುರಕ್ಕೆ ತೆರಳಿದ್ದಾರೆ.  ಅನುಮತಿಯಿಲ್ಲದೆ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೂರ್ತಿ ತೆರವುಗೊಳಿಸಿರುವುದಕ್ಕೆ  ಆಕ್ರೋಶ ವ್ಯಕ್ತವಾಗಿದೆ.

Related Posts

Leave a Reply

Your email address will not be published. Required fields are marked *