Menu

ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಒಪ್ಪಿಗೆ

manmohan singh

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಬಂದಿದ್ದು, ಈ ಮನವಿಯನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮಾರಕ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಿದ್ದಾರೆಂದು ತಿಳಿಸಿದೆ.

ಸ್ಮಾರಕಕ್ಕಾಗಿ ಟ್ರಸ್ಟ್ ರಚನೆ ಮತ್ತು ಜಾಗದ ಹಂಚಿಕೆಯನ್ನು ಅಂತಿಮಗೊಳಿಸಿರುವುದರಿಂದ, ಅಂತ್ಯಕ್ರಿಯೆ ಮತ್ತು ಔಪಚಾರಿಕತೆಗಳು ಈ ಮಧ್ಯೆ ಮುಂದುವರಿಯಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

Related Posts

Leave a Reply

Your email address will not be published. Required fields are marked *