Tuesday, September 22, 2026
Menu

ಕಾವೇರಿ ನೀರು ಹಂಚಿಕೆ: ಹೊಸ ಅರ್ಜಿಗಳ ಪರಿಗಣಿಸಲು ಸುಪ್ರೀಂ ನಿರಾಕರಣೆ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹೊಸ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಈ ವಿವಾದ ಕತ್ನಾಟಕ ಮತ್ತು ತಮಿಳುನಾಡುವಗಳ ಮಧ್ಯೆ ಇದ್ದು, ಎರಡೂ ರಾಜ್ಯಗಳು ಈಗಾಗಲೇ ಈ ಸಂಬಂಧ ಕಾನೂನು ಹೋರಾಟ ನಡೆಸುತ್ತಿವೆ ಎಂದು ನ್ಯಾಯಾಲಯ ಹೇಳಿದೆ.

ಈಗಾಗಲೇ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಗಳೆರಡು ಕಾನೂನು ಹೋರಾಟ ನಡೆಸುತ್ತಿರುವಾಗ ಸಂಘ-ಸಂಸ್ಥೆಗಳ ಅರ್ಜಿಗಳನ್ನು ಪರಿಗಣಿಸಲು ಪ್ರಾರಂಭಿಸಿದರೆ ಅದಕ್ಕೆ ಯಾವುದೇ ಅಂತ್ಯವಿರುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

ತಮಿಳುನಾಡಿನ ಪಾಲಿನಿಂದ 70 ಟಿಎಂಸಿ ಕಾವೇರಿ ನದಿ ನೀರನ್ನು ಕರ್ನಾಟಕಕ್ಕೆ ಮರುಹಂಚಿಕೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಪರಿಗಣಿಸಲು ನ್ಯಾಯಪೀಠ ನಿರಾಕರಿಸಿದೆ. ಆಗಸ್ಟ್ 31ರ ವೇಳೆಗೆ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದು, 9,000 ಕ್ಯೂಸೆಕ್‌ ನೀರು ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನ ಪಾಲಿಸುತ್ತಿರುವುದಾಗಿ ಕರ್ನಾಟಕ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು.

ತಮಿಳುನಾಡಿಗೆ 15 ದಿನ 9,000 ಕ್ಯೂಸೆಕ್ ನೀರು ಹರಿಯುವುದನ್ನು ಖಚಿತಪಡಿಸುವಂತೆ ಕರ್ನಾಟಕಕ್ಕೆ ಸೂಚಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯಶಿಫಾರಸನ್ನು ಆಗಸ್ಟ್ 25 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.

ಬಾಕಿ ಇರುವ ನೀರಿನ ಪ್ರಮಾಣದ ಬಗ್ಗೆ ತಾವು ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದರೂ ಈ ಕುರಿತು ಯಾವುದೇ ನಿರ್ದೇಶನ ಹೊರಡಿಸಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ತಮಿಳುನಾಡಿಗೆ ತಕ್ಷಣವೇ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನ ಪಾಲಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಆಗಸ್ಟ್ 17 ರಂದು ಕರ್ನಾಟಕಕ್ಕೆ ಸೂಚಿಸಿತ್ತು.

ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇತೃತ್ವದ ರಾಜ್ಯ ಸರ್ಕಾರ ಆಗಸ್ಟ್ 3 ರಂದು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿತ್ತು. ಕಾವೇರಿ ನೀರು ನಿಯಂತ್ರಣ ಸಮಿತಿ ನಿಗದಿಪಡಿಸಿದ ನೀರಿನ ಪ್ರಮಾಣ ಹಾಗೂ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣ- ಎರಡೂ ಅತ್ಯಲ್ಪವಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಿತ್ತು.

Related Posts

Leave a Reply

Your email address will not be published. Required fields are marked *