ಹಾಸನದ ಚನ್ನರಾಯಪಟ್ಟಣದಲ್ಲಿ ಬೈಕ್ ಸ್ಕಿಡ್ ಆಗಿ ಹೇಮಾವತಿ ನಾಲೆಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಹೇಮಂತ್ (24) ಮೃತಪಟ್ಟ ಯುವಕ.
ಕೆಇಬಿ ನೌಕರ ಹೇಮಂತ್ ಬುಧವಾರ ಸಂಜೆ ಕಚೇರಿ ಪಕ್ಕದಲ್ಲೇ ಹಾದು ಹೋಗಿರುವ ಹೇಮಾವತಿ ನಾಲೆ ಸಮೀಪ ಬೈಕ್ನಲ್ಲಿ ಹೊರಟಿದ್ದರು. ಬೈಕ್ ಸ್ಕಿಡ್ ಹರಿಯುತ್ತಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೇಮಂತ್ ಶವಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ಕೈಗೊಂಡಿದ್ದಾರೆ.
ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು
ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತವಾಗೊ ಒಬ್ಬ ಪ್ರಯಾಣಿಕ ಮೃತಪಟ್ಟು, ಆಡು ಮಂದಿ ಗಾಯಗೊಂಡಿರುವ ಘಟನೆ ಹಾವೇರಿಯ ಹಳೇರತ್ತಿ ಗ್ರಾಮದ ಬಳಿ ನಡೆದಿದೆ.
ಚನ್ನೂರು ಗ್ರಾಮದ ನಿವಾಸಿ ಎಸ್.ಎಸ್.ಮಠದ್ ಮೃತಪಟ್ಟವರು. ಸಾರಿಗೆ ಬಸ್ನಲ್ಲಿ 30ಕ್ಕೂ ಅಧಿಕ ಮಂದಿ ಪ್ರಯಾಣ ಮಾಡುತ್ತಿದ್ದರು. ಆರು ಮಂದಿಗೆ ಗಂಭೀರ ಗಾಯವಾಗಿ, ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಹುಬ್ಬಳ್ಳಿ ಕಿಮ್ಸ್ ಆಸ್ಪತೆಗೆ ದಾಖಲಿಸಲಾಗಿದೆ.
ಬಸ್ ಹಾವೇರಿಯಿಂದ ನೆಗಳೂರು ಗ್ರಾಮಕ್ಕೆ ಹೊರಟ್ಟಿತ್ತು ಎನ್ನಲಾಗಿದೆ. ಕ್ಯಾಬೇಜ್ ತುಂಬಿಕೊಂಡು ಹೋಗಲು ಬಂದಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊದೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ
ಬೆಂಗಳೂರಿನ ಆನೇಕಲ್ ರಸ್ತೆ ಬದಿಯ ಪೊದೆಯಲ್ಲಿ ಸಿಕ್ಕಿದ್ದ ಶವದ ಗುರುತು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆನೇಕಲ್ ತಾಲೂಕಿನ ರಾಮಕೃಷ್ಣಪುರ ರಸ್ತೆ ಬದಿ ಪತ್ತೆಯಾಗಿದ್ದ ಶವ ಸುಭಾಷ್ ಎಂಬ ಯುವಕನದ್ದು ಎಂಬುದು ಗೊತ್ತಾಗಿದೆ.
ಸುಭಾಷ್ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದ ನಿವಾಸಿ, ಡಕಾಯಿತಿ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಗ್ಯಾಂಗ್ ಕಟ್ಟಿಕೊಂಡು ಆಟೋದಲ್ಲಿ ಓಡಾಡುತ್ತಿದ್ದ. ಸುಭಾಷ್ ಹಾಗೂ ಗ್ಯಾಂಗ್ 23ರಂದು ರಾತ್ರಿ ಆಟೋದಲ್ಲಿ ಬಂದು ರಾಮಕೃಷ್ಣಪುರ ರಸ್ತೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಮಾರಕಾಸ್ತ್ರಗಳಿಂದ ಹೊಡೆದು ಆತನನ್ನು ಕೊಲೆ ಮಾಡಲಾಗಿದೆ. ಆರೋಪಿಗಳು ಕೊಲೆ ಮಾಡಿ ಆಟೋದಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಸೂರ್ಯನಗರ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.


