Thursday, September 24, 2026
Menu

CWMA ಆದೇಶದಂತೆ ತಮಿಳ್ನಾಡಿಗೆ ನೀರು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ತಾಕೀತು

supreme court

ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CW M A) ನೀಡಿರುವ ಆದೇಶ ಪಾಲನೆ ಮುಂದುವರಿಸಿ ಎಂದು ಸುಪ್ರೀಂಕೋರ್ಟ್‌ ಕರ್ನಾಟಕಕ್ಕೆ ಹೇಳಿದೆ. ತಮಿಳುನಾಡು ಸಲ್ಲಿಸಿರುವ   ಆಕ್ಷೇಪಕ್ಕೆ ಒಂದು ವಾರದೊಳಗೆ ಪರಮಾಣಪತ್ರ ಸಲ್ಲಿಸುವಂತೆಯೂ ಹೇಳಿದ್ದು, ವಿಚಾರಣೆಯನ್ನು ಅಕ್ಟೋಬರ್‌ ೧೨ಕ್ಕೆ ಮುಂದೂಡಿದೆ.

ಕರ್ನಾಟಕದಲ್ಲಿ ಮಳೆಯ ತೀವ್ರ ಕೊರತೆ ಕಾರಣ ಜಲಾಶಗಳಲ್ಲಿ ನೀರಿನ ಮಟ್ಟ ಕುಸಿದಿದೆ, ಕಾವೇರಿ ಜಲಾನಯನ ಪ್ರದೇಶದಲ್ಲೂ ನೀರಿನ ಲಭ್ಯತೆ ಕಡಿಮೆಯಾಗಿದೆ ಎಂದು ರಾಜ್ಯ ಸರ್ಕಾರ ಕೋರ್ಟ್‌ಗೆ ವಿವರಿಸಿದೆ. ಕಲೆದ ವರ್ಷ ಈ ಅವಧಿಯಲ್ಲಿ ೮೧ ಕೋಟಿ ಟಿಎಂಸಿ ನೀರು ಸಂಗ್ರಹವಿತ್ತು, ಆದರೆ ಈ ಬಾರಿ ಒಳಹರಿವು ಸಾಕಷ್ಟು ಕಡಿಮೆ ಪ್ರಮಾಣದಲ್ಲಿದೆ ಎಂದು ತಿಳಿಸಿದೆ.

ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದೆ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. CWMA ಆದೇಶದಂತೆ ನೀರು ಬಿಡುಗಡೆ ಮಾಡುವುದು ಕಷ್ಟ ಎಂದು ಕರ್ನಾಟಕ ವಾದ ಮಂಡಿಸಿದೆ. ಕುಡಿಯುವ ನೀರು, ಪರಿಸರ ಮತ್ತು ಕೈಗಾರಿಕೆಗಳ ಅಗತ್ಯಗಳನ್ನು ಪರಿಗಣಿಸಿ ತಮಿಳುನಾಡು ಹೆಚ್ಚುವರಿ ನೀರು ಬಿಡುಗಡೆಗೆ ಸಲ್ಲಿಸಿರುವ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ತಮಿಳುನಾಡಿನಲ್ಲಿ ನೀರಿನ ಕೊರತೆ ಎದುರಾಗಿದೆ ಎಂದು ಆ ರಾಜ್ಯದ ಪರ ವಕೀಲರು ತಿಳಿಸಿದ್ದಾರೆ. 4.5 ಲಕ್ಷ ಎಕರೆ ಬೆಳೆಗಳಿಗೆ ನೀರಿನ ಅಗತ್ಯವಿದ್ದು, ಕರ್ನಾಟಕ CWMA ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.
ನೀರಿನ ಕೊರತೆಯಿಂದಾಗಿ ಈಗಾಗಲೇ ಪೂರ್ವೈ ಬೆಳೆ ನಷ್ಟವಾಗಿದೆ. ಕೋರ್ಟ್‌ ಈ ಹಿಂದೆ ನೀಡಿದ್ದ ತೀರ್ಪಿನಂತೆ ಪ್ರಮಾಣಾನುಗುಣವಾಗಿ ನೀರು ಬಿಡುಗಡೆ ಮಾಡುವಂತೆ ಆದೇಶವನ್ನು ಜಾರಿಗೊಳಿಸಬೇಕು ಎಂದು ತಮಿಳುನಾಡು ಪರ ವಕೀಲರು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *