Thursday, September 24, 2026
Menu

ಬಂಗಾರಪೇಟೆಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಮೂವರ ಸಾವು

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲೂಕಿನ ಮಗರಲ್‌ ಬಳಿ ನಡೆದಿದೆ. ಗಾಯಗೊಂಡಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು  ಬಂಗಾರಪೇಟೆ ಮತ್ತು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ, ಮೃತರು ಹಾಗೂ ಗಾಯಾಳುಗಳು ಪುಣೆ ಮೂಲದವರು ಎನ್ನಲಾಗಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರಿಗೆ ಕೋಲಾರ ಸಂಸದ ಮಲ್ಲೇಶ್ ಬಾಬು ನೆರವಾಗಿದ್ದಾರೆ. ತೊಪ್ಪನಹಳ್ಳಿ ಗ್ರಾಮದ ಜಗದೀಶ್ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ತೆರಳುತ್ತಿದ್ದ ಮಲ್ಲೇಶ್ ಬಾಬು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿಟ್‌ ಅಂಡ್‌ ರನ್‌ಗೆ ಇಬ್ಬರು ಬಲಿ
ರಾಯಚೂರಿನ ದೇವದುರ್ಗ ತಾಲೂಕು ಜಾಲಹಳ್ಳಿ ಬಳಿ ಬುಧವಾರ ರಾತ್ರಿ ಹಿಟ್‌ ಅಂಡ್‌ ರನ್‌ಗೆ ಇಬ್ಬರು ಬಲಿಯಾಗಿದ್ದಾರೆ. ಹನುಮಯ್ಯ (50) ಮತ್ತು ಲಿಂಗರಾಜು (35) ಮೃತಪಟ್ಟವರು, ರಾಮಲಿಂಗಪ್ಪ ನಾಯಕ ಹಾಗೂ ರಂಗನಾಥ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಲಹಳ್ಳಿಯಿಂದ ತಿಂಥಣಿ ಬ್ರಿಜ್ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನ ಮಾರ್ಗ ಮಧ್ಯೆ ಎದುರಿಗೆ ಬರುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಬೊಲೆರೋ ಸಮೇತ ಚಾಲಕ ಪರಾರಿ ಆಗಿದ್ದು, ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *