ಉತ್ತರಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಈವರೆಗೆ ೫೬ ಮಂದಿ ಬಲಿಯಾಗಿದ್ದಾರೆ. ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಾಹ ಮತ್ತಿತರ ಅವಘಡಗಳಲ್ಲಿ ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜ್ಯದ ೬೩ ಜಿಲ್ಲೆಗಳ್ಲಲಿ ವ್ಯಾಪಕ ಮಳೆಯಾಗಿದೆ, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ೪೫.೧ ಮಿಲಿಮೀಟರ್ ಮಳೆ ಸುರಿದಿದ್ದು, ೧೦೨೧ ಮನೆಗಳು ಹಾನಿಗೊಂಡಿವೆ. ಇನ್ನೂ ಇಪ್ಪತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಘಾಗ್ರಾ ಮತ್ತು ರಾಪ್ತಿ ನದಿ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಲ ಆಯೋಗ ಮಾಹಿತಿ ನೀಡಿದೆ.
ಭಾರಿ ಮಳೆಗೆ ಲಕ್ಲೋ ಐತಿಹಾಸಿಕ ಗೇಟ್‌ನ ಒಂದು ಭಾಗ ಕುಸಿದುಬಿದ್ದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ವಾಹನ ಹಾಗೂ ಪಾದಾಚಾರಿಗಳ ಓಡಾಟವಿರುತ್ತದೆ. ಘಟನೆ ಸಮಯದಲ್ಲಿ ಕಡಿಮೆ ಜನರಿದ್ದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಅಲ್ಲಲ್ಲಿ ವಾಹನಗಳ ಮೇಲೆ ಮರಗಳು ಬಿದ್ದಿವೆ.
ಭಾರೀ ಮಳೆಯಾಗುತ್ತಿರುವುದರಿಂದ ನೇಪಾಳದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ರಕ್ಷಣಾ ತಂಡಗಳು ಸಕ್ರಿಯವಾಗಿವೆ, ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ತಕ್ಷಣದ ನೆರವು ನೀಡಲು ಕ್ರಮ ಕೈಗೊಂಡಿದ್ದಾರೆ.


