ಬೆಂಗಳೂರಿನ ಕೆಂಗೇರಿ ಸಮೀಪವಿರುವ ಮೆಡಿಕಲ್ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತಪಟ್ಟ ವ್ಯಕ್ತಿ.
ಸೋಮವಾರ ಬೆಳಗಿನ ಜಾವ ಐದು ಗಂಟೆಗೆ ಘಟನೆ ನಡೆದಿದ್ದು, ವಾಕಿಂಗ್‌ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿರುವ ಸಾಧ್ಯತೆ ಇದೆ. ಸ್ಥಳದಲ್ಲಿ ಎರಡು ಕಾಂಪೌಂಡ್ ಉರುಳಿಬಿದ್ದಿವೆ.
ಸಿಸಿಟಿವಿ ಪರಿಶೀಲನೆ ವೇಳೆ ಆನೆ ಆ ಪ್ರದೇಶದಲ್ಲಿ ಓಡಾಟ ಮಾಡಿರುವುದು ದಾಖಲಾಗಿದೆ. ಬೆಳಗ್ಗೆ 5 ಗಂಟೆ 11 ನಿಮಿಷಕ್ಕೆ ಆನೆ ವೇಗವಾಗಿ ಓಡುವ ದೃಶ್ಯ ಲಭ್ಯವಾಗಿದೆ. ಅದೇ ರಸ್ತೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಲವೇ ಸೆಕೆಂಡ್‌ಗಳಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ: ಒಬ್ಬನ ಕೊಲೆ
ಬೆಂಗಳೂರಿನ ಪೀಣ್ಯದ ಗುಲ್ಬರ್ಗ ಕಾಲೊನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ರೌಡಿಶೀಟರ್‌ವೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ದೀಪಕ್ ಕೊಲೆಯಾದವ, ಎರಡು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿತ್ತು. ಇದೇ ಕಾರಣಕ್ಕೆ ದೀಪಕ್ ಮೇಲೆ ದಾಳಿ ಮಾಡಿದ ಗ್ಯಾಂಗ್ ಹತ್ಯೆಗೈದಿದೆ.
ಎರಡು ದಿನದ ಹಿಂದೆ ದೀಪಕ್, ಈಶ್ವರ್ ನೇಪಾಳಿ, ಸುಮನ್ ಎಂಬವರು ಗಲಾಟೆ ಮಾಡಿದ್ದರು. ಪೀಣ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


