Monday, September 28, 2026
Menu

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ: 21 ಮಂದಿ ಸಾವು

ಕಳೆದ ಆಗಸ್ಟ್‌ನಲ್ಲಿ ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತಕ್ಕೆ 1,450ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಈಗ ಮತ್ತೆ ಪ್ರವಾಹ ಮತ್ತು ಭೂಕುಸಿತ ಸಂಭವಿಸಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ನೇಪಾಳದ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರವಾಹದಿಂದ ಮನೆಗಳು ಹಾನಿಗೊಂಡಿವೆ. ರಸ್ತೆ ಸಂಚಾರಕ್ಕೂ ತೊಡಕುಂಟಾಗಿದೆ. ಭೂಕುಸಿತ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇಳಿಜಾರು ಇರುವ ಒಂದು ಭಾಗವೇ ಸಂಪೂರ್ಣ ಕುಸಿದು ಜನ ಕಂಗೆಟ್ಟು ಸಿಕ್ಕಲ್ಲಿಗೆ ಓಡುತತಿರುವುದು ಆ ವೀಡೊಇಯೊದಲ್ಲಿ ದಾಖಲಾಗಿದೆ.

ಪಾಲ್ಪಾ ಜಿಲ್ಲೆಯ ಮಠಗಢಿ ಗ್ರಾಮೀಣ ಪುರಸಭೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಐವರು ಮೃತಪಟ್ಟಿದ್ದಾರೆ. ಕಳೆದ 4 ದಿನಗಳಲ್ಲಿ ಪ್ರವಾಹ, ಭೂಕುಸಿತ ಹಾಗೂ ಸಿಡಿಲು ಸೇರಿದಂತೆ ಮಳೆ ಸಂಬಂಧಿತ ಅವಘಡಗಳಲ್ಲಿ 16 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಪ್ರವಾಹ ಹಾಗೂ ಭೂಕುಸಿತಕ್ಕೆ ಸಿಲುಕಿದ್ದ 1,284 ಮಂದಿಯನ್ನು ಭದ್ರತಾ ಸಿಬ್ಬಂದಿ ರಕ್ಷಿಸಿದ್ದಾರೆ.

ಲುಂಬಿನಿ ಪ್ರಾಂತ್ಯದ ರೂಪಂದೇಹಿ ಜಿಲ್ಲೆಯಲ್ಲಿ ಟಿನಾವು ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬುಟ್ವಾಲ್‌ನಲ್ಲಿ 6 ಮನೆಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿವೆ.

ಕೇದಾರನಾಥದಲ್ಲಿ ಭೂಕುಸಿತ: 1,500 ಯಾತ್ರಿಕರ ಸ್ಥಳಾಂತರ

ಕೇದಾರನಾಥ ಮಾರ್ಗದ ಚಿರ್ಬಾಸಾ ಬಳಿ ಏಕಾಏಕಿ ಸಂಭವಿಸಿದ ಭೂಕುಸಿತದಿಂದ ಐದು ವರ್ಷದ ಬಾಲಕ ಮೃತಪಟ್ಟಿದ್ದು, 1,500 ಯಾತ್ರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲಾಗಿದೆ.

ಗೌರಿಕುಂಡದಿಂದ 3 ಕಿ.ಮೀ ದೂರದಲ್ಲಿರುವ ಚಿರ್ಬಾಸಾ ಬಳಿಯ ಮಾರ್ಗದಲ್ಲಿ ಬೆಟ್ಟದಿಂದ ಬಂಡೆ, ಶಿಲಾಖಂಡದ ರಾಶಿಗಳು ಕುಸಿದಿವೆ. ಕಲ್ಲು ಬಡಿದು ಉತ್ತರ ಪ್ರದೇಶದ ಇಟಾ ಮೂಲದ ಬಾಲಕ ಯಶ್(5) ಮೃತಪಟ್ಟಿದ್ದಾನೆ.

ಸಬ್ ಇನ್ಸ್ಪೆಕ್ಟರ್ ಆಶಿಶ್ ಡಿಮ್ರಿ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿ, 1,500 ಯಾತ್ರಿಕರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *