Tuesday, September 29, 2026
Menu

ಟೆಂಡರ್‌ ಅಕ್ರಮ: ಸಚಿವ ಯತೀಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಡಿ ಕೆಎಸ್‌ಡಿಸಿ ಮತ್ತು ಕೆಎಸ್‌ಡಬ್ಲ್ಯುಎಎನ್‌ ಟೆಂಡರ್‌ ಪ್ರಕ್ರಿಯೆಯಲ್ಲಿ 444 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ, ಸಚಿವ
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಯತೀಂದ್ರ ಜೊತೆಗೆ ಐಎಎಸ್‌ ಅಧಿಖಾರಿ ಭೂಬಾಲನ್‌ ವಿರುದ್ಧವೂ ದಾಖಲೆ ಸಹಿತ ಬಿಜೆಪಿ ಮುಖಂಡ ಎನ್‌ ಆರ್‌ ರಮೇಶ್‌ ದೂರು ನೀಡಿದ್ದಾರೆ. 2025ರಲ್ಲಿ ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಸಚಿವ ಯತೀಂದ್ರ, ಅಧಿಕಾರಿಗಳ‌ ವಿರುದ್ಧ ತನಿಖೆ ನಡೆಸಬೇಕು ಎಂದು ರಮೇಶ್ ಆಗ್ರಹಿಸಿದ್ದಾರೆ.

ಈ ಟೆಂಡರ್‌ ಪ್ರಕ್ರಿಯೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಡೆದಿತ್ತು. ಆಗ ಡಿಪಿಎಆರ್‌ ಇಲಾಖೆ ಅವರಲ್ಲೇ ಇತ್ತು, ಹೀಗಾಗಿ ಯತೀಂದ್ರ ಅವರ ಅಣತಿಯಂತೆ ಟೆಂಡರ್‌ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಅರ್ಹತೆ ಇಲ್ಲದ ಹೈದರಾಬಾದ್‌ ನ ಕಂಪೆನಿಗೆ ಟೆಂಡರ್‌ ನೀಡಲಾಗಿದೆ, ಇ-ಆಡಳಿತ ವಿಭಾಗದ ಸಿಇಒ ಅಧಿಕಾರಿ ಭೂಬಾಲನ್ ಸೇರಿದಂತೆ ಮೂವರು ಅಧಿಕಾರಿಗಳ‌ ವಿರುದ್ಧವೂ ದೂರು ನೀಡಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್

ಗೃಹಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಗಂಭೀರ ಆರೋಪ ಮಾಡಿದ್ದು, ಮೋಸ್ಟ್‌ ಕರಪ್ಟ್‌ ಪರ್ಸನ್‌ ಎಂದು ಹೇಳಿದ್ದಾರೆ.  ಕಲ್ಯಾಣ ಕರ್ನಾಟಕ ಭಾಗದಲ್ಲಿ ದಲಿತರ ಮಾರಣ ಹೋಮವಾಗುತ್ತಿದೆ, ಈ ಬಗ್ಗೆ ಸಚಿವರು ಒಂದು ಹೇಳಿಕೆ ಕೂಡ ಕೊಟ್ಟಿಲ್ಲ, ಇಂಥ ಸಚಿವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಸೋಲಿನ ಭಯದಿಂದ ಲೂಟಿ ಮಾಡುವುದಕ್ಕೆ ಕಾಂಗ್ರೆಸ್ ಇಳಿದಿದ್ದು, ಈ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಎಸ್ಸಿಎಸ್ಟಿ ಗೆ ಸೇರಿದ ಹಣ ದುರ್ಬಳಕೆ ಮಾಡಲಾಗಿದೆ ಎಂದು ಛಲವಾದಿ ದೂರಿದ್ದಾರೆ.

ಪ್ರಿಯಾಂಕ್ ಖರ್ಗೆ . ಬರೀ ಆರ್​ಎಸ್​ಎಸ್​​ ಬಗ್ಗೆ ಅವರು ಮಾತಾಡ್ತಿದ್ದಾರೆ. ಆರೆಸ್ಸೆಸ್‌ ಮುಗಿಸಲು ಪ್ರಿಯಾಂಕ್ ಖರ್ಗೆ ಅಪ್ಪನಿಂದಲೂ ಆಗಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಿಲ್ಲ. ದಲಿತರ ಉದ್ಧಾರ ಬಗ್ಗೆ ಇವರಿಗೆ ಕಿಂಚಿತ್ತೂ ಕಾಳಜಿ ಇಲ್ಲ. ದಲಿತರ ಹೆಸರು ಬಳಸಿಕೊಂಡು ಆಸ್ತಿ ಮಾಡಿದ್ದಾರೆ ಅಷ್ಟೇ. ಗೃಹ ಸಚಿವರ ಭಾಗದಲ್ಲೇ 13 ಅಟ್ರಾಸಿಟಿ ಕೇಸ್ ದಾಖಲಾಗಿವೆ ಎಂದು ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published. Required fields are marked *