Menu

ಕಸ ವಿಂಗಡಿಸುವ ಯಂತ್ರಕ್ಕೆ ಸಿಕ್ಕಿ ಮಹಿಳೆ ಸಾವು – ತುಂಡು ತುಂಡಾದ ದೇಹ

ಕಸ ವಿಂಗಡಿಸುವ ಯಂತ್ರಕ್ಕೆ ಸಿಕ್ಕಿ ಮಹಿಳೆ ಸಾವು – ತುಂಡು ತುಂಡಾದ ದೇಹ

ಚಿಕ್ಕಬಳ್ಳಾಪುರ: ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಭೀಕರವಾಗಿ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ.ಕಾಡತಿಪ್ಪೂರು ಮೂಲದ ಅರಸಮ್ಮ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಯಂತ್ರ ಕಾರ್ಯನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾರೆ. ಯಂತ್ರದೊಳಗೆ ಸಿಲುಕಿದ ಪರಿಣಾಮ ಮಹಿಳೆಯ ಕೈ-ಕಾಲುಗಳು ತುಂಡಾಗಿ ಬಿದ್ದಿದ್ದವು.

ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನತದೃಷ್ಟ ಮಹಿಳೆ
ಮೃತ ಅರಸಮ್ಮ ಅವರು ಈ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕಸವನ್ನು ತಂದು ಈ ಘಟಕದಲ್ಲಿ ವಿಂಗಡಣೆ ಮಾಡುವ ಕಾರ್ಯ ನಡೆಸಲಾಗುತ್ತಿತ್ತು. ಅಕ್ಟೋಬರ್ 2ರ ಬೆಳಗ್ಗೆ ಕಸ ವಿಂಗಡಣೆ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.

#Doddaballapur #Chikkaballapur #WasteSegregationPlant #TragicAccident #PoliceNews #UdayakalaNews #KarnatakaNews

Related Posts

Leave a Reply

Your email address will not be published. Required fields are marked *