ಉದಯಕಾಲ ನ್ಯೂಸ್, ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆಯಿದ್ದವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಭೀಕರ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಅಜಿತ್ (32), ರಾಕೇಶ್ (22), ಸಂದೀಪ್ (33) ಹಾಗೂ ಶೃತಿ (28) ಎಂದು ಗುರುತಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ನವಲಗುಂದ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
#DharwadAccident #Navalgund #Amaragola #CanterCarCollision #KarnatakaRoadAccident #UdayakalaNews #DharwadNews #AccidentNews
ಕ್ಯಾಂಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿ – ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ!


