Saturday, October 10, 2026
Menu

ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ಸಿ.ಇ.ತಿಮ್ಮಯ್ಯ ಅನಾರೋಗ್ಯದಿಂದ ನಿಧನ!

ಉದಯಕಾಲ ನ್ಯೂಸ್, ಮಂಡ್ಯ: ಕರ್ತವ್ಯನಿಷ್ಠ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಮಂಡ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಸಿ.ಇ.ತಿಮ್ಮಯ್ಯ (57) ಅವರು ಅನಾರೋಗ್ಯದಿಂದ ಇಂದು (ಅಕ್ಟೋಬರ್ 10) ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿ.ಇ.ತಿಮ್ಮಯ್ಯ ಅವರನ್ನು ಮಂಡ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಹಾಗೂ ಪೊಲೀಸ್ ಇಲಾಖೆ ತಿಳಿಸಿದೆ.

ದಕ್ಷ ಹಾಗೂ ಪ್ರಾಮಾಣಕ ಅಧಿಕಾರಿ

ಕಳೆದ ಮೂರು ವರ್ಷಗಳಿಂದ ಮಂಡ್ಯ ಜಿಲ್ಲೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾಗಿ (ASP) ಸಿ.ಇ.ತಿಮ್ಮಯ್ಯ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಅತ್ಯಂತ ಕರ್ತವ್ಯನಿಷ್ಠರಾಗಿ ಹೆಸರುವಾಸಿಯಾಗಿದ್ದ ಅವರು, ಜಿಲ್ಲೆಯಲ್ಲಿ ಎದುರಾದ ಅನೇಕ ಸವಾಲಿನ ಹಾಗೂ ಸೂಕ್ಷ್ಮ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು.

ವಿಶೇಷವಾಗಿ ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆ, ಗಣಪತಿ ವಿಸರ್ಜನಾ ಗಲಾಟೆ, ಕೆರಗೋಡು ಧ್ವಜ ವಿವಾದ ಹಾಗೂ ಸಾರ್ವತ್ರಿಕ ಚುನಾವಣೆಗಳಂತಹ ಅತ್ಯಂತ ಸೂಕ್ಷ್ಮ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ

ಮೃತ ಅಧಿಕಾರಿಯ ಪಾರ್ಥಿವ ಶರೀರವನ್ನು ಮಂಡ್ಯದಲ್ಲಿ ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನಕ್ಕಾಗಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ತದನಂತರ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸಿ.ಇ.ತಿಮ್ಮಯ್ಯ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿ ಸಿಬ್ಬಂದಿ ಹಾಗೂ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

#Udayakala #UdayakalaNews #MandyaNews #MandyaASP #CETimmayya #KarnatakaPolice #MandyaPolice #Condolences #KarnatakaNews #PoliceOfficerRIP

Related Posts

Leave a Reply

Your email address will not be published. Required fields are marked *