Thursday, October 22, 2026
Menu

ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ: ಇಬ್ಬರ ಸಾವು, 8 ಮಂದಿಗೆ ಗಾಯ

ರಿಯಾದ್: ಸೌದಿ ಅರೇಬಿಯಾದ ಪ್ರಮುಖ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ನಡೆಸಲಾದ ಕ್ಷಿಪಣಿ/ಡ್ರೋನ್ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ.

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಐತಿಹಾಸಿಕ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಮೇಲೆ ಈ ದಾಳಿ ನಡೆದಿದೆ ಎಂದು ಸೌದಿ ಅರೇಬಿಯಾದ ಜನರಲ್ ಅಥಾರಿಟಿ ಆಫ್ ಸಿವಿಲ್ ಏವಿಯೇಷನ್ ಅಧಿಕೃತವಾಗಿ ಖಚಿತಪಡಿಸಿದೆ.

ದಾಳಿಯ ವಿವರ

ಬುಧವಾರ ಸಂಜೆ ಸಂಭವಿಸಿದ ಈ ದಾಳಿಯ ತೀವ್ರತೆಗೆ ವಿಮಾನ ನಿಲ್ದಾಣದ ಮೂಲಸೌಕರ್ಯಗಳಿಗೆ ಹಾನಿಯಾಗಿದ್ದು, ಸ್ಥಳದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡಿರುವ ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಿಂದ ಹಿಡಿದು ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿಸಲಾಗಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ವೈದ್ಯಕೀಯ ಚಿಕಿತ್ಸೆ ಕೊಡಿಸುತ್ತಿದ್ದಾರೆ. ದಾಳಿಯಿಂದ ಉಂಟಾಗಿರುವ ಆಸ್ತಿಪಾಸ್ತಿ ಹಾನಿಯ ನಿಖರ ಮೌಲ್ಯವನ್ನು ಅಂದಾಜು ಮಾಡಲಾಗುತ್ತಿದೆ.

ಅಮೆರಿಕದಿಂದ ಎಚ್ಚರಿಕೆ ಹಾಗೂ ರಾಜತಾಂತ್ರಿಕ ಸಿಬ್ಬಂದಿ ವಾಪಸ್‌

ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು ಮತ್ತು ಇತರೆ ಪ್ರಮುಖ ಮೂಲಸೌಕರ್ಯಗಳ ಮೇಲೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಸರಣಿ ದಾಳಿಗಳನ್ನು ಮುಂದುವರಿಸಿದ್ದು, ಇದು ನಾಗರಿಕರಲ್ಲಿ ತೀವ್ರ ಭೀತಿ ಹಾಗೂ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅಡಚಣೆಯನ್ನುಂಟು ಮಾಡಿದೆ. ಈ ಬೆಳವಣಿಗೆಯ ಗಂಭೀರತೆಯನ್ನು ಪರಿಗಣಿಸಿರುವ ಅಮೆರಿಕ ಸರ್ಕಾರವು, ಸೌದಿ ಅರೇಬಿಯಾದಲ್ಲಿರುವ ತನ್ನ ತುರ್ತು ಸೇವೆಯಲ್ಲಿಲ್ಲದ ರಾಜತಾಂತ್ರಿಕ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡಲೇ ದೇಶ ತೊರೆಯುವಂತೆ ಆದೇಶಿಸಿದೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಹೌತಿಗಳ ನಿರಂತರ ದಾಳಿಗಳ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ವಾಯು ರಕ್ಷಣಾ ವ್ಯವಸ್ಥೆಗಳನ್ನು ಹೆಚ್ಚು ಜಾಗೃತಗೊಳಿಸಲಾಗಿದೆ.

#SaudiArabia #DammamAirport #KingFahdAirport #HouthiAttack #WorldNews #UdayakalaNews #BreakingNews #MiddleEastConflict #CrimeNews

Related Posts

Leave a Reply

Your email address will not be published. Required fields are marked *