Saturday, October 24, 2026
Menu

ಕೆಪಿಎಸ್‌ಸಿ ಹಗರಣದಲ್ಲಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ!

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಹಗರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮತಿ ನೀಡಿದೆ.

ತನಿಖೆಗೆ ಸಿಎಂ ಡಿಕೆಶಿ ಗ್ರೀನ್ ಸಿಗ್ನಲ್

ಕೆಪಿಎಸ್‌ಸಿಯಲ್ಲಿ ಹಿಂದೆ ನಡೆದಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅನುಮತಿ ಕೋರಲಾಗಿತ್ತು. ಈ ಪ್ರಸ್ತಾವನೆಗೆ ಸರ್ಕಾರದ ಮಟ್ಟದಲ್ಲಿಯೂ ಒಪ್ಪಿಗೆ ಸಿಕ್ಕಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಹಾಗೂ ಪ್ರಾಸಿಕ್ಯೂಷನ್ ನಡೆಸಲು ಸಿಎಂ ಡಿಕೆ ಶಿವಕುಮಾರ್ ಕಚೇರಿಯಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಸರ್ಕಾರದ ಕಠಿಣ ನಿಲುವು: ಸಿಎಂ ಸ್ಪಷ್ಟನೆ

ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಸಾರ್ವಜನಿಕ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಈ ಕುರಿತು ಎಕ್ಸ್ (X) ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ. ಯುವಜನತೆಯ ಭವಿಷ್ಯದ ಜೊತೆ ಆಟವಾಡುವ ಯಾವುದೇ ಕೃತ್ಯಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.
ಸಾರ್ವಜನಿಕ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಭ್ರಷ್ಟಾಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಹಾಗೂ ಆಡಳಿತಕ್ಕೆ ಕಪ್ಪುಚುಕ್ಕೆ ತರುವ ಕೃತ್ಯಗಳಿಗೆ ಯಾವುದೇ ಮನ್ನಣೆಯಿಲ್ಲ ಎಂದು ನುಡಿದಿದ್ದಾರೆ.
#KPSCScam #GyanendraKumar #IASOfficer #UdayakalaNews #KarnatakaGovernment #KPSC #AntiCorruption #BengaluruNews #KarnatakaPolitics

Related Posts

Leave a Reply

Your email address will not be published. Required fields are marked *