ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಲೆಫ್ಟಿ ನಂಟ್ ಗವರ್ನರ್ ಸೂಚನೆ ನೀಡಿದ್ದಾರೆ.
೨೦೧೫ ಹಾಗೂ ೨೦೨೨೦ರಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಈ ಬಾರಿ ಆಡಳಿತ ವಿರೋಧಿ ಅಲೆಯಿಂದಾಗಿ ಎಎಪಿ ಅಧಿಕಾರ ಕಳೆದುಕೊಂಡರೆ, ಬಿಜೆಪಿ ಬಹುಮತ ದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.
೭೦ ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ೪೮ ಸ್ಥಾನ ಗೆದ್ದುಕೊಂಡರೆ, ಎಎಪಿ ೨೨ ಸ್ಥಾನ ಮಾತ್ರ ದಕ್ಕಿದೆ. ಕಾಂಗ್ರೆಸ್ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ಸೋತಿದೆ. ಮಾಜಿ ಮುಖ್ಯ ಮಂತ್ರಿ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರು ಸೋಲಿನ ರುಚಿ ಕಂಡಿದ್ದಾರೆ.