ಉದಯಕಾಲ ನ್ಯೂಸ್, ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯ ಸುತ್ತಮುತ್ತ ಸುರಿಯುತ್ತಿರುವ ಭರ್ಜರಿ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಕಳೆದ ಕೆಲವು ದಿನಗಳಿಂದ ಮಳೆಯ ಕೊರತೆ ಹಾಗೂ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಬೇಕಾದ ಅನಿವಾರ್ಯತೆಯಿಂದಾಗಿ ಜಲಾಶಯದ ನೀರಿನ ಮಟ್ಟ ಕುಸಿದು ಕೃಷಿ ಹಾಗೂ ಕುಡಿಯುವ ನೀರಿನ ಬಗ್ಗೆ ಆತಂಕ ಮೂಡಿತ್ತು. ಆದರೆ, ಪ್ರಸ್ತುತ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವುದರಿಂದ ಡ್ಯಾಮ್‌ಗೆ ಜೀವಕಳೆ ಬಂದಂತಾಗಿದೆ.
ಜಲಾಶಯದ ಇಂದಿನ ನೀರಿನ ಮಟ್ಟದ ವಿವರ
ನಿನ್ನೆ 9,475 ಕ್ಯೂಸೆಕ್‌ನಷ್ಟಿದ್ದ ಜಲಾಶಯದ ಒಳಹರಿವು, ಇಂದು 11,864 ಕ್ಯೂಸೆಕ್‌ಗಳಿಗೆ ತಲುಪಿದೆ. ಮಳೆ ಮುಂದುವರಿದಿರುವುದರಿಂದ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡ್ಯಾಂ ನೀರಿನ ಮಟ್ಟವು 103.96 ಅಡಿಗೆ ಏರಿಕೆಯಾಗಿದೆ (ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳು) ಸದ್ಯ ಜಲಾಶಯದಲ್ಲಿ 26.074 ಟಿಎಂಸಿಗೂ ಅಧಿಕ ನೀರು ಸಂಗ್ರಹವಿದ್ದು, ನಡಿಗೆ ಮುನ್ನೆಚ್ಚರಿಕೆ ಕ್ರಮವಾಗಿ 1,996 ಕ್ಯೂಸೆಕ್ ನೀರನ್ನು ಮಾತ್ರ ಹೊರಬಿಡಲಾಗುತ್ತಿದೆ.
ರೈತರಲ್ಲಿ ಹೊಸ ನಿರೀಕ್ಷೆ
ಕಾವೇರಿ ಕೊಳ್ಳದಲ್ಲಿ ಮಳೆಯ ಅಬ್ಬರ ಹೀಗೆಯೇ ಮುಂದುವರಿದರೆ ಜಲಾಶಯದ ನೀರಿನ ಸಂಗ್ರಹ ಮತ್ತಷ್ಟು ಹೆಚ್ಚಾಗಲಿದ್ದು, ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂಬ ವಿಶ್ವಾಸವನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ವರುಣನ ಕೃಪೆಯಿಂದ ಕಾವೇರಿ ಒಡಲು ಮರುಚೇತರಿಕೆ ಕಾಣುತ್ತಿರುವುದು ಹಳೆ ಮೈಸೂರು ಭಾಗದ ರೈತರಲ್ಲಿ ಹೊಸ ಆಶಾಕಿರಣ ಮೂಡಿಸಿದೆ.
#KRSDam #CauveryBasin #MandyaNews #KarnatakaRains #UdayavaniNews #CauveryRiver #Monsoon2026 #FarmersJoy #MandyaUpdates


