ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ನ (ಕೆಬಿಎ) 75ನೇ ವಜ್ರಮಹೋತ್ಸವದ ಐತಿಹಾಸಿಕ ಸಂಭ್ರಮದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ ನೀಡಲಾಗಿದೆ.
ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಷನ್ (BAI) ಮತ್ತು ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ (BWF) ಅಧಿಕೃತ ಮಾನ್ಯತೆಯೊಂದಿಗೆ ಆಯೋಜಿಸಲಾಗಿರುವ ಈ ‘ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್–2026’ ಕ್ರೀಡಾಕೂಟವನ್ನು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಇಂದಿನಿಂದ ನವೆಂಬರ್ 1ರವರೆಗೆ ನಗರದ ಜಸ್ಮಾ ಭವನ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ನ ಒಳಾಂಗಣ ಕ್ರೀಡಾಂಗಣದಲ್ಲಿ ಈ ಟೂರ್ನಿ ಅತ್ಯಂತ ಯಶಸ್ವಿಯಾಗಿ ನಡೆಯಲಿದೆ.ಈ ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ ಒಟ್ಟು 214 ಆಟಗಾರರು ಕಣಕ್ಕಳಿದಿದ್ದಾರೆ. ಆಸ್ಟ್ರೇಲಿಯಾದ ಆಟಗಾರ ಅವಿನಾಶ್ ಶ್ರೀನಿವಾಸ್ ಸೇರಿದಂತೆ ಹಲವು ವಿದೇಶಿ ತಾರೆಯರು ತಮ್ಮ ಕೌಶಲ್ಯ ಪ್ರದರ್ಶಿಸಲಿದ್ದಾರೆ.
ಪ್ರಮುಖ ಭಾರತೀಯ ಸ್ಟಾರ್ಗಳು
ಭಾರತದ ಅನುಭವಿ ಆಟಗಾರ್ತಿ ಹಾಗೂ ಅರ್ಜುನ ಪ್ರಶಸ್ತಿ ವಿಜೇತೆ ಅಶ್ವಿನಿ ಪೊನ್ನಪ್ಪ, ಧ್ರುವ್ ಕಪಿಲ, ತನಿಶಾ ಕ್ರ್ಯಾಸ್ಟೋ, ಮಿಥುನ್ ಮಂಜುನಾಥ್, ಚಿರಾಗ್ ಸೇನ್ ಹಾಗೂ ಸತೀಶ್ ಕುಮಾರ್ ಕರುಣಾಕರನ್ ಸೇರಿದಂತೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಹಲವು ಪ್ರಮುಖ ಆಟಗಾರರು ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ.
ಈ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ, ಕಾರ್ಯದರ್ಶಿ ಮುರಳೀಧರ್ ಹಾಗೂ ಬ್ಯಾಡ್ಮಿಂಟನ್ ಡೆವಲಪ್ಮೆಂಟ್ ಕಮಿಟಿ ಅಧ್ಯಕ್ಷರಾದ ಗುರುಪ್ರಸಾದ್ ಸೇರಿದಂತೆ ಕ್ರೀಡಾ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದು ಆಟಗಾರರಿಗೆ ಶುಭ ಹಾರೈಸಿದರು.
ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಕೆಬಿಎ ವತಿಯಿಂದ ಆಯೋಜಿಸಲಾಗಿರುವ ಈ ಅಂತಾರಾಷ್ಟ್ರೀಯ ಟೂರ್ನಿಯು ರಾಜ್ಯದ ಯುವ ಪ್ರತಿಭೆಗಳಿಗೆ ದೊಡ್ಡ ಪ್ರೋತ್ಸಾಹ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
#KBADiamondJubilee #IndiaInternationalChallenge #BangaloreSports #BadmintonTournament #AshwiniPonnappa #UdayakalaNews #KarnatakaSports #BWF #BadmintonIndia


