Menu

ಉದ್ಯೋಗಿಗಳ ವಜಾ ಖಂಡಿಸಿ ಇನ್ಫೋಸಿಸ್‌ ವಿರುದ್ಧ ಕೇಂದ್ರ ಸರ್ಕಾರಕ್ಕೆ ಐಟಿ ಸಂಘಟನೆ ದೂರು

ಮೈಸೂರು ಕ್ಯಾಂಪಸ್‌ನಿಂದ ಇತ್ತೀಚೆಗೆ  300ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದು ಹಾಕಿದ ಇನ್ಫೋಸಿಸ್‌ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಕಾರ್ಮಿಕ ಇಲಾಖೆಗೆ ಐಟಿ ಉದ್ಯೋಗಿಗಳ ಸಂಘಟನೆ ಎನ್‌ಐಟಿಇಎಸ್‌ ಸಲ್ಲಿಸಿರುವ ದೂರಿನಲ್ಲಿ, ಇನ್ಫೋಸಿಸ್‌ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿದೆ.

ಕಂಪನಿಯು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಬೌನ್ಸರ್‌ಗಳು ಮತ್ತು ಭದ್ರತಾ ಸಿಬ್ಬಂದಿಗಳ ಮೂಲಕ ಉದ್ಯೋಗಿಗಳಿಗೆ ಬೆದರಿಕೆ ಹಾಕಿದೆ.  ವಜಾ ಮಾಡಿದ ಉದ್ಯೋಗಿಗಳಿಗೆ ಮುಂಚೆಯೇ ಸೂಚನೆ ನೀಡಿಲ್ಲ. ಇದು ಅವರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದಿದೆ.  ಕೈಗಾರಿಕಾ ವಿವಾದ ಕಾಯ್ದೆ ನಿಬಂಧನೆ ಉಲ್ಲಂಘಿಸಿದಕ್ಕಾಗಿ ಇನ್ಫೋಸಿಸ್‌ ವಿರುದ್ಧ ಕ್ರಮ ಹಾಗೂ ವಜಾ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದೆ.

ಇನ್ಫೋಸಿಸ್  ಇತ್ತೀಚೆಗೆ ಕ್ಯಾಂಪಸ್ ನೇಮಕಾತಿ ಮಾಡಿಕೊಂಡವರನ್ನು ಬಲವಂತವಾಗಿ ವಜಾಗೊಳಿಸುವ ಕ್ರಮಕ್ಕೆ ಮುಂದಾಗಿದೆ ಎಂದು ಬಾಧಿತ ಉದ್ಯೋಗಿಗಳಿಂದ ಬಂದ ಹಲವಾರು ದೂರುಗಳ ಮೂಲಕ ನಮ್ಮ ಗಮನಕ್ಕೆ ಬಂದಿದೆ ಎಂದು ನೈಟ್ಸ್‌ನ ವಕೀಲ ಮತ್ತು ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲೂಜಾ  ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಲಿಖಿತ ಪತ್ರದಲ್ಲಿ ತಿಳಿಸಿದ್ದಾರೆ.

ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿ ನಂತರವೂ ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕೆ ಹೊಸದಾಗಿ ನೇಮಕಗೊಂಡ 300 ಉದ್ಯೋಗಿಗಳನ್ನು ತೆಗೆದು ಹಾಕಿರುವುದಾಗಿ  ಇನ್ಫೋಸಿಸ್‌ ಸಮರ್ಥಿಸಿಕೊಂಡಿದೆ.  ಮೈಸೂರು ಸೇರಿ ಇನ್ಫೋಸಿಸ್ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ವಜಾಗೊಳಿಸಿದೆ ಎಂದು ಹೇಳಲಾಗುತ್ತಿದೆ.

Related Posts

Leave a Reply

Your email address will not be published. Required fields are marked *