ರಾಷ್ಟ್ರಪತಿ ದ್ರೌಪದಿ ಮರ್ಮು ಸೋಮವಾರ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು.
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಗೆ ಸೋಮವಾರ ಬೆಳಿಗ್ಗೆ ಬಂದಿಳಿದ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು.
ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ನಂತರ ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಿದರು.
ಭಾನುವಾರ ತ್ರಿವೇಣಿ ಸಂಗಮದಲ್ಲಿ ಸುಮರು 8.4 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ಶುರುವಾದಾಗಿನಿಂದ ಇಲ್ಲಿಯವರೆಗೆ 42 ಕೋಟಿಗೂ ಅಧಿಕ ಜನರು ತ್ರಿವೇಣಿಯಲ್ಲಿ ಮಿಂದೆದ್ದಿದ್ದಾರೆ.