Saturday, February 22, 2025
Menu

ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್‌ ಪ್ರಯತ್ನ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ.

30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಯ ನಂತರ ಮಂಗಳವಾರ (ಇಂದು) ಸಭೆ ನಡೆಯಲಿದೆ.
ಪಂಜಾಬ್ ನಲ್ಲಿ ಎಎಪಿಯೊಳಗೆ ವಿಭಜನೆ ಮತ್ತು ರಾಜ್ಯ ಸರ್ಕಾರದಲ್ಲಿ ಪುನರ್ರಚನೆ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ  ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪಂಜಾಬ್‌ನಲ್ಲಿ 2022ರ ವಿಧಾನಸಭಾ ಚುನಾವಣೆಯಲ್ಲಿ, ಎಎಪಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ನಿಂದ ಅಧಿಕಾರವನ್ನು ಕಸಿದುಕೊಂಡಿತ್ತು.  ಅಸೆಂಬ್ಲಿಯಲ್ಲಿ ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿ ದಳ ಮೂರು ಶಾಸಕರನ್ನು ಹೊಂದಿದೆ. ಅಲ್ಲಿ ಬಿಜೆಪಿಗೆ ಸ್ಥಾನವಿಲ್ಲ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್  ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ಹೋರಾಟ ಮುಂದುವರಿಸಲಿದ್ದಾರೆ. ನವದೆಹಲಿ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕೇಜ್ರಿವಾಲ್, ದೆಹಲಿಯ ಜನರ ಹಕ್ಕುಗಳಿಗಾಗಿ ಹೋರಾಡಲು ರಾಜ್ಯಸಭೆಗೆ ಹೋಗಬಹುದು ಎಂದು ಪಕ್ಷದ ವಲಯದಲ್ಲಿ ಮಾತು ಹರಡಿದೆ.

ಎಎಪಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ, ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂದು ಅವರ ಆಪ್ತರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸೋತಿದ್ದರೂ, 2030ರವರೆಗೆ ಅದು ಇನ್ನೂ ಮೂರು ರಾಜ್ಯಸಭಾ ಸ್ಥಾನಗಳನ್ನು ಹೊಂದಿದೆ.

. ದೆಹಲಿಯ ೭೦ ಸದಸ್ಯರ ವಿಧಾನಸಭೆಯಲ್ಲಿ ೪೮ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ೨೬ ವರ್ಷಗಳ ನಂತರ ಅಧಿಕಾರಕ್ಕೆ ಮರಳಿದೆ, ಇದು ೨೦೨೦ ರ ೮ ಕ್ಕಿಂತ ೪೦ ಹೆಚ್ಚಾಗಿದೆ.

Related Posts

Leave a Reply

Your email address will not be published. Required fields are marked *