ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (85) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಫೆಬ್ರವರಿ 3 ರಂದು ಅವರು ಪಾರ್ಶ್ವವಾಯು ಪೀಡಿತರಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸತ್ಯೇಂದ್ರ ದಾಸ್ ಅವರಿಗೆ ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ಪಾರ್ಶ್ವವಾಯುವುಂಟಾಗಿ ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಅವರು 1993 ರಿಂದ ರಾಮನನ್ನು ಪೂಜಿಸುತ್ತಿದ್ದರು.
ಅವರು ಆಸ್ಪತ್ರೆಯಲ್ಲಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದರು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ದೇವಾಲಯದ ಆಡಳಿತ ಮಂಡಳಿಗೆ ಸಂಬಂಧಿಸಿದ ಇತರರು ಮುಖ್ಯ ಅರ್ಚಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.