ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಅವರ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರ ಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದ್ದು, ಈ ಸಂಬಂಧ 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳಾದ ತಿರುವನಂತಪುರದ ಮೂವರು ನೀಡಿದ ದೂರಿನ ಅನ್ವಯ ಪೊಲೀಸರು ಕೂಡಲೇ ಕ್ರಮ ಕೈಗೊಂಡು 5 ಹಿರಿಯ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ನವೆಂಬರ್ 24ರಿಂದ ಸರಿ ಸುಮಾರು 3 ತಿಂಗಳ ಕಾಲ ವಿದ್ಯಾರ್ಥಿಗಳನ್ನು ರ್ಯಾಗಿಂಗ್ ಮೂಲಕ ಚಿತ್ರ ಹಿಂಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ವಿಕೃತಿ ಮೆರೆದಿದ್ದಾರೆ. ಅಲ್ಲದೇ ಜಾಮಿಟ್ರಿ ಬಾಕ್ಸ್ ಕಂಪಾಸ್ ನಿಂದ ಹಲವಾರು ಬಾರಿ ಚುಚ್ಚಿ ಸಾಕಷ್ಟ ಬಾರಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕೊಟ್ಟಾಯಂ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಗಳು ಸತತ ಮೂರು ತಿಂಗಳು ರ್ಯಾಗಿಂಗ್ ಮೂಲಕ ಹಿಂಸೆ ನಡೆಸಿದ್ದು, ಇದನ್ನು ವೀಡಿಯೋದಲ್ಲಿ ಸೆರೆಹಿಡಿದಿದ್ದು, ಒಂದು ವೇಳೆ ಹೊರಗೆ ಬಾಯಿಬಿಟ್ಟರೆ ವಿದ್ಯಾಭ್ಯಾಸಕ್ಕೆ ಅಡ್ಡಿ ಮಾಡುವುದೂ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಅವರು ಬೆದರಿಕೆ ಹಾಕಿದ್ದರು ಎಂದು ವಿವರಿಸಲಾಗಿದೆ.
ಕಿರಿಯ ವಿದ್ಯಾರ್ಥಿಗಳಿಂದ ಮದ್ಯ ಸೇವಿಸಲು ಹಣದ ಬೇಡಿಕೆ ಕೂಡ ಇಟ್ಟಿದ್ದಾರೆ. ಅಲ್ಲದೇ ಗಾಯದ ಮೇಲೆ ಲೋಷನ್ ಹಾಕಿ ನೋವು ಹೆಚ್ಚಾಗುವಂತೆ ಮಾಡಿ ಚಿತ್ರಹಿಂಸೆ ನೀಡಿದ್ದಾರೆ. ಇವರ ಕಾಟ ತಡೆಯಲಾರದೇ ಒಬ್ಬ ವಿದ್ಯಾರ್ಥಿ ಪೋಷಕರ ಬಳಿ ಹೇಳಿಕೊಂಡಿದ್ದು, ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.