Saturday, February 22, 2025
Menu

ದ್ವಿಪಕ್ಷೀಯ ಸಂಬಂಧ ಬಲವರ್ಧನೆಗಾಗಿ ಪ್ರಧಾನಿ ಮೋದಿ-ಟ್ರಂಪ್‌ ಮಾತುಕತೆ

ಅಮೆರಿಕ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ.

ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ಅಮೆರಿಕ ಭೇಟಿ ಮತ್ತು ಉಭಯ ನಾಯಕರು ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಮಾತುಕತೆ ಇದಾಗಿತ್ತು.

ಭಾರತ ಮತ್ತು ಅಮೆರಿಕ ರಕ್ಷಣೆ, ಇಂಧನ ಮತ್ತು ನಿರ್ಣಾಯಕ ತಂತ್ರಜ್ಞಾನ ಸೇರಿದಂತೆ ಹಲವಾರು ನಿರ್ಣಾಯಕ ಕ್ಷೇತ್ರಗಳಲ್ಲಿ ತಮ್ಮ ಕಾರ್ಯತಂತ್ರದ ಸಂಬಂಧಗಳನ್ನು ವಿಸ್ತರಿಸುವಲ್ಲಿ ದೊಡ್ಡ ಹೆಜ್ಜೆ ಇಡಲು ನಿರ್ಧರಿಸಿದವು. ಆಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಎರಡೂ ರಾಷ್ಟ್ರಗಳ ಅಭಿಪ್ರಾಯ ವಿನಿಮಯಗೊಂಡಿತು. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತುಕತೆ ಫಲಪ್ರದವಾಗಿತ್ತು. “ಭಾರತ-ಯುಎಸ್ಎ ಸ್ನೇಹಕ್ಕೆ ಗಮನಾರ್ಹ ವೇಗವನ್ನು ನೀಡುತ್ತವೆ” ಎಂದು ಪ್ರಧಾನಿ ಮೋದಿ ಸಾಮಾಜಿಕ ಖಾತೆ ಎಕ್ಸ್‌ನಲ್ಲಿ ಹೇಳಿದ್ದಾರೆ. ಭಾರತ-ಯುಎಸ್ಎ ಸಮೃದ್ಧಿಗಾಗಿ ಬೃಹತ್‌ ಪಾಲುದಾರಿಕೆಯನ್ನು ಹೊಂದಿರುವುದಾಗಿ ಮೋದಿ ತಿಳಿಸಿದ್ದಾರೆ.

ಮೋದಿ ಅವರೊಂದಿಗಿನ ಮಾತುಕತೆಯ ಬಳಿಕ ಟ್ರಂಪ್ ಅವರು ಅಮೆರಿಕವು ಶತಕೋಟಿ ಡಾಲರ್‌ಗಳಷ್ಟು ಮಿಲಿಟರಿ ಸರಬರಾಜುಗಳನ್ನು ಹೆಚ್ಚಿಸುವ ಭಾಗವಾಗಿ ದೆಹಲಿಗೆ ಎಫ್‌-35 ಫೈಟರ್ ಜೆಟ್‌ಗಳನ್ನು ಒದಗಿಸಲು ದಾರಿ ಮಾಡಿಕೊಡುತ್ತಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದು ಪ್ರವಾಸ ಅತ್ಯಂತ ಫಲಪ್ರದವಾಗಿ ಮುಗಿಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಅಮೆರಿಕಕ್ಕೆ ಎರಡು ದಿನಗಳ ಭೇಟಿಯಲ್ಲಿ, ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಸೇರಿದಂತೆ ಪ್ರಮುಖ ಅಮೆರಿಕನ್ ಅಧಿಕಾರಿಗಳನ್ನು ಭೇಟಿಯಾದರು. ಸರ್ಕಾರಿ ದಕ್ಷತೆ ಇಲಾಖೆಯ ನೇತೃತ್ವ ವಹಿಸಿರುವ ಸ್ಪೇಸ್‌ಎಕ್ಸ್ ಸಿಇಒ ಎಲೋನ್ ಮಸ್ಕ್ ಮತ್ತು ಭಾರತೀಯ-ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಸೇರಿದಂತೆ ಪ್ರಮುಖ ವ್ಯಾಪಾರ ನಾಯಕರೊಂದಿಗೆ ಸಂವಾದ ನಡೆಸಿದರು.

 

Related Posts

Leave a Reply

Your email address will not be published. Required fields are marked *