ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಡೆದ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಶುಕ್ರವಾರ ತೆರೆಬಿದ್ದಿದೆ.
ಬಂಡವಾಳ ಹೂಡಿಕೆದಾರರಿಂದ ನಿರೀಕ್ಷೆಗಿಂತ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಶೇ.75ರಷ್ಟು ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿಗಳು ಮುಂದಾಗಿವೆ. ಇದರಲ್ಲಿ ಶೇ.45ರಷ್ಟು ಉತ್ತರ ಕರ್ನಾಟಕ ಭಾಗದಲ್ಲಿ ಬಂಡವಾಳ ಹರಿದು ಬಂದಿದೆ ಎಂದು ಅವರು ಹೇಳಿದರು.
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಅತೀ ಹೆಚ್ಚು ಅಂದರೆ ಶೇ.41ರಷ್ಟು ಬಂಡವಾಳ ಹೂಡಿಕೆ ಆಗಿದೆ. ಉಳಿದಂತೆ ಸ್ಟಾರ್ಟ್ ಅಪ್, ಸ್ಟೀಲ್, ಕಬ್ಬಿಣ, ಸೀಮೆಂಟ್, ಗ್ಯಾಸ್, ಟೆಲಿಕಾಂ, ಏರ್ ಪೋರ್ಟ್ ಮುಂತಾದ ಕ್ಷೇತ್ರಗಳಿಗೂ ಬಂಡವಾಳ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ.