ಪ್ರಧಾನಿ ನರೇಂದ್ರ ಮೋದಿ ಹುಟ್ಟನಿಂದ ಹಿಂದುಳಿದ ವರ್ಗಕ್ಕೆ ಸೇರಿಲ್ಲ, ಅಕ್ರಮವಾಗಿ ಈ ವರ್ಗಕ್ಕೆ ಸೇರಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.
ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನ್ಮತಹ ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ. ಅವರು ಮೇಲ್ವರ್ಗಕ್ಕೆ ಸೇರಿದವರು. ಆದರೆ ಅಕ್ರಮವಾಗಿ ಹಿಂದುಳಿದ ವರ್ಗಕ್ಕೆ ಸೇರ್ಪಡೆಯಾಗಿದ್ದಾರೆ ಎಂದಿದ್ದಾರೆ.
ನಾನು ಒಂದು ವಿಷಯ ಹೇಳಲು ಬಯಸಯತ್ತೇನೆ. ಮೋದಿ ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ. ಅವರು 2001ರಲ್ಲಿ ಅಕ್ರಮವಾಗಿ ಹಿಂದುಳಿದ ವರ್ಗಕ್ಕೆ ಸೇರ್ಪಡೆಯಾಗಿದ್ದಾರೆ. ಗುಜರಾತ್ ನಲ್ಲಿ ಅವರ ಸಮುದಾಯದ ಮೇಲ್ವರ್ಗಕ್ಕೆ ಸೇರುತ್ತದೆ. ಅವರು ಮುಖ್ಯಮಂತ್ರಿ ಆದ ನಂತರ ತಮ್ಮ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಅವರು ವಿವರಿಸಿದರು.
ಮೋದಿ ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ, ಮೇಲ್ವರ್ಗಕ್ಕೆ ಸೇರಿದವರು. ಈ ಕಾರಣಕ್ಕಾಗಿಯೇ ಅವರ ನಿಲುವುಗಳು ಹಿಂದುಳಿದ ವರ್ಗಗಳ ವಿರೋಧಿ ಆಗಿರುತ್ತದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ರೇವಂತ್ ರೆಡ್ಡಿ ಹೇಳಿದರು.
ರೇವಂತ್ ರೆಡ್ಡಿ ಹೇಳಿಕೆಗೆ ಕೇಂದ್ರ ಕಲ್ಲಿದ್ದಲು ಸಚಿವ ಹಾಗೂ ಬಿಜೆಪಿ ಮುಖಂಡ ಕಿಶನ್ ರೆಡ್ಡಿ ಆಕ್ಷೇಪಿಸಿದ್ದು, ಮೋದಿ ಹಿಂದುಳಿದ ವರ್ಗಕ್ಕೆ ಸೇರಿದ್ದಾರೋ ಇಲ್ಲವೋ ಎಂಬ ಬಗ್ಗೆ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.
ಮತ್ತೊಬ್ಬ ಬಿಜೆಪಿ ಸಚಿವ ಬಂಡಿ ಸಂಜಯ್ ಕುಮಾರ್, ರಾಹುಲ್ ಗಾಂಧಿ ಅವರ ಜಾತಿ ಮತ್ತು ವಂಶದ ಬಗ್ಗೆ ಮೊದಲು ತಿಳಿದುಕೊಳ್ಳಿ ಎಂದು ಕಿಡಿಕಾರಿದ್ದಾರೆ.