ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ.
ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ.
50ಕ್ಕೂ ಹೆಚ್ಚು ಮಂದಿ ಸಂಬಂಧಿಕರ ಜೊತೆ ಅವರು ದೇವರ ಕಾರ್ಯಕ್ಕೆ ಬಂದಿದ್ದರು. ಈ ವೇಳೆ ನದಿಗೆ ಸ್ನಾನ ಮಾಡಲು ಹೋಗಿದ್ದಾಗ ಕಾಲು ಜಾರಿ ಈ ದುರ್ಘಟನೆ ನಡೆದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.