Saturday, February 22, 2025
Menu

ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ.

ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೊಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯನ್ನು ಗಮನದಲ್ಲಿರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು.

ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ನೀರಾವರಿ ಫೀಡರ್ ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ (ಸಂಜೆ 6 ರಿಂದ ಬೆಳಗ್ಗೆ 6ರವರೆಗೆ) ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ ಮಾಡಿದೆ .

Related Posts

Leave a Reply

Your email address will not be published. Required fields are marked *