ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ್ ಜಿಲ್ಲೆಯ ರೂಪಾಪೂರದಲ್ಲಿ ಸಂಭವಿಸಿದೆ.
ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಕಾಶಿಗೆ ತೆರಳುತ್ತಿದ್ದಾಗ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ (35), ಸಂತೋಷ್ (43), ನೀಲಮ್ಮ (60) ಸೇರಿದಂತೆ 5 ಮಂದಿ ಅಸುನೀಗಿದ್ದಾರೆ.
ಬೀದರ್ ಮೂಲದ 12 ಮಂದಿ ಕ್ರೂಸರ್ ನಲ್ಲಿ ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಕಾಶಿಯಂದ 20 ಕಿ.ಮೀ.ದರೂದಲ್ಲಿ ನಿಯಂತ್ರಣ ತಪ್ಪಿದ ಕ್ರೂಸರ್ ಲಾರಿಗೆ ಹಿಂಬದಿಯಿಂದ ಗುದ್ದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ೫ ಮಂದಿ ಅಸುನೀಗಿದ್ದು, ಮೂವರು ಗುರುತು ಮಾತ್ರ ಪತ್ತೆಯಾಗಿದ್ದು, ಉಳಿದವರ ಪತ್ತೆ ಕಾರ್ಯ ನಡೆದಿದೆ. ಉಳಿದವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.
ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.