ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಲೈವ್ ಬ್ಯಾಂಡ್‌ನಿಂದ ಶನಿವಾರ ರಾತ್ರಿ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ.
ತಡರಾತ್ರಿ 1 ಗಂಟೆಗೆ ಘಟನೆ ನಡೆದಿದ್ದು, ಆನೆಪಾಳ್ಯ ನಿವಾಸಿ ಶೇಖ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಹತ್ಯೆ ಮಾಡಿದ್ದಾರೆ.
ಜೊತೆಯಲ್ಲಿದ್ದ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಅವರು ಅಸು ನೀಗಿದ್ದರು.
ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಅಶೋಕ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.