Menu

ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ, ಬಸವರಾಜ ಕುರಟ್ಟಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್‌ರಾಜ್​ನ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಇಂದು (ಸೋಮವಾರ) ಬೆಳಗಿನ ಜಾವ ಅಪಘಾತ ಸಂಭವಿಸಿದೆ. ಕ್ರೂಸರ್ ನಿಂತಿದ್ದ ಬಸ್​ಗೆ ಡಿಕ್ಕಿ ಹೊಡೆದಿದೆ.

Related Posts

Leave a Reply

Your email address will not be published. Required fields are marked *