ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ಷರತ್ತು ಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ.
ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಿವೆ.
ಮೂನ್ನೂರು ಮಂದಿಗೆ ಅನುಮತಿ ನೀಡಿರುವ ನ್ಯಾಯಾಲಯದ ನಿರ್ದೇಶನದಂತೆ ಹಾಗೂ ಯಾವುದೇ ಪ್ರಚೋಧನಕಾರಿ ಭಾಷಣ ಮಾಡದಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದ ಪಕ್ಕದ ಸ್ಪೋರ್ಟ್ಸ್ ಪೆವಿಲಿಯನ್ ಕ್ರೀಡಾಂಗಣದಲ್ಲಿ ಪ್ರತಿಭಟನೆಗೆ ಪೊಲೀಸರು ಸಿದ್ದತೆ ಮಾಡಿಕೊಟ್ಟಿದ್ದಾರೆ. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ತುಕಡಿಗಳ ನಿಯೋಜಿಸಿ ಪ್ರತಿಭಟನೆ ಕಾನೂನು ಚೌಕಟ್ಟಿನಲ್ಲಿ ನಡೆಯಲು ವ್ಯವಸ್ಥೆ ಕಲ್ಪಿಸಿದ್ದಾರೆ.