Tuesday, November 17, 2026
Menu

ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ.

ಘಟನೆಯಿಂದ ಸಾಕರಸನಹಳ್ಳಿ ಸೇರಿದಂತೆ ಕಾಡಂಚಿನ ಗ್ರಾಮಗಳ ನಿವಾಸಿಗಳು ಹಾಗೂ ರೈತರಲ್ಲಿ ಆತಂಕ ಮನೆಮಾಡಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಈ ಕಾಡಾನೆ ದಾಳಿಯ ಭೀತಿಯಲ್ಲಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪರಿಸರದ ನಾಗರಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Related Posts

Leave a Reply

Your email address will not be published. Required fields are marked *